November 5, 2026
ತಾಲೂಕು ಸುದ್ದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ .ಸಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಪ್ರಗತಿಬಂಧು ಒಕ್ಕೂಟದ ಸ್ವ ಸಹಾಯ ಸಂಘದ ಹಿರಿಯ ಸದಸ್ಯರೊಂದಿಗೆ ಡಾ.ಹೆಗ್ಗಡೆಯವರ ಸಂವಾದ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಮಂಜುನಾಥ ಕಲಾ ಭವನದಲ್ಲಿನಡೆದ ಪ್ರಗತಿಬಂಧು ಒಕ್ಕೂಟದ ಸ್ವ ಸಹಾಯ ಸಂಘದ ಹಿರಿಯ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಿ ಹಿರಿಯರ ಅನುಭವಗಳನ್ನು ಆಲಿಸಿದರು.

ಬಳಿಕ ಹೆಗ್ಗಡೆಯವರು ಮಾತನಾಡಿ ಮಾರ್ಗದರ್ಶನ ನೀಡಿದರು. ವೇದಿಕೆಯಲ್ಲಿ ಎಸ್‌ಕೆಡಿಆರ್‌ಡಿಪಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಜನ ಜಾಗೃತಿ ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ವಿಧಾನಪರಿಷತ್ ಮಾಜಿ ಶಾಸಕರಾದ ಪ್ರತಾಪ್ ಸಿಂಹ ನಾಯಕ್. ಯೋಜನೆಯ ಟ್ರಸ್ಟಿ ಹರಿಕೃಷ್ಣ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಹಣಕಾಸು ಮಾರ್ಗದರ್ಶಕ ಶಾಂತಾರಾಮ ಪೈ ಉಪಸ್ಥಿತರಿದ್ದರು.

ರವಿಚಂದ್ರ ಕನ್ಯಾ ಡಿಕಟ್ಟೆ ಪ್ರಾರ್ಥನೆ ನೆರವೇರಿಸಿದರು. ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾ ಹಾಗೂ ಕೃಷಿ ಅಧಿಕಾರಿ ರಾಮಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಎಸ್‌ಕೆಡಿಆರ್‌ಡಿಪಿ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ವಂದಿಸಿದರು.

Related posts

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya
error: Content is protected !!