November 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ವಾರ್ಷಿಕ ಕ್ರೀಡಾಕೂಟ– 2026 ಅದ್ದೂರಿ ಚಾಲನೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಆಯೋಜಿಸಲಾದ ಅನುಗ್ರಹ ವಾರ್ಷಿಕ ಕ್ರೀಡಾಕೂಟ – 2026 ಕ್ರೀಡಾಕೂಟವು ಉತ್ಸಾಹ ಹಾಗೂ ಸಂಭ್ರಮದ ವಾತಾವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ವಹಿಸಿದ್ದರು. ಮುಖ್ಯ ಅತಿಥಿಯಾಗಿ ರಾಷ್ಟ್ರಮಟ್ಟದ ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತರಾದ ಹಾಗೂ ಐದು ಬಾರಿ ಕರ್ನಾಟಕ ಕಬಡ್ಡಿ ತಂಡದ ನಾಯಕತ್ವ ವಹಿಸಿದ ಸುಶಾಂತ್ ಶೆಟ್ಟಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಜೊತೆಗೆ ಶಿಸ್ತು, ಸಮಯಪ್ರಜ್ಞೆ, ನಾಯಕತ್ವ, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಗೆಲುವು ಮತ್ತು ಸೋಲುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿಯಿಂದ ಮುನ್ನಡೆಯುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂ. ಫಾ. ಡಾ. ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜಾ, ಕಾರ್ಯದರ್ಶಿ ಮರ್ಲಿನ್ ಮೆನೇಜಸ್, ಶಾಲಾ ಅಭಿವೃದ್ಧಿ ಮಂಡಳಿಯ ಸದಸ್ಯರಾದ ಸ್ಟೀವನ್ ಮೊಂತೇರೊ, ಬಬಿತಾ ಮೋರಸ್, ಜೈಸನ್ ಮೋರೆಸ್ ಉಪಸ್ಥಿತರಿದ್ದರು.

ಮುಖ್ಯ ಅತಿಥಿ ಸುಶಾಂತ್ ಶೆಟ್ಟಿಯವರ ಕ್ರೀಡಾ ಸಾಧನೆಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದ್ದು, ಅವರ ಉಪಸ್ಥಿತಿಯು ಕ್ರೀಡಾಕೂಟಕ್ಕೆ ವಿಶೇಷ ಮೆರುಗು ನೀಡಿತು.

ವಿದ್ಯಾರ್ಥಿಗಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಮತ್ತು ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಉದ್ದೇಶದಿಂದ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಕ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಪೋಷಕರು ಸಹಕರಿಸಿದರು. ಸಹಶಿಕ್ಷಕ ಗಣೇಶ್ ಇವರು ಸ್ವಾಗತಿಸಿ, ಕ್ರೀಡಾ ಮಂತ್ರಿ ಕು. ಅನ್ವಿತ ಡಿಸೋಜಾ ಇವರು ವಂದಿಸಿ, ಸಹಶಿಕ್ಷಕಿ ಶ್ರೀಮತಿ ವಿನಯಲತಾ ಇವರು ಕಾರ್ಯಕ್ರಮ ನಿರೂಪಿಸಿದರು

ಕ್ರೀಡೆಯ ಮೂಲಕ ಆರೋಗ್ಯವಂತ, ಶಿಸ್ತಿನ ಮತ್ತು ಆತ್ಮವಿಶ್ವಾಸವುಳ್ಳ ವಿದ್ಯಾರ್ಥಿಗಳನ್ನು ರೂಪಿಸುವ ಅನುಗ್ರಹ ಶಿಕ್ಷಣ ಸಂಸ್ಥೆಯ ಆಶಯಕ್ಕೆ ಈ ಕ್ರೀಡಾಕೂಟ ಸಾಕ್ಷಿಯಾಯಿತು.

Related posts

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

Suddi Udaya

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya
error: Content is protected !!