ಬೆಳ್ತಂಗಡಿ: ಗುರುವಾಯನಕೆರೆಯ ಪ್ರತಿಷ್ಠಿತ ಕಾಲೇಜು ಎಕ್ಸೆಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್ ಕಂಪೆನಿ ವತಿಯಿಂದ ಗೌರವಿಸಲಾಯಿತು.
ಕಳೆದ 6-7 ವರ್ಷಗಳಿಂದ ಬಹಳಷ್ಟು ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ವಿದ್ಯಾಭ್ಯಾಸ ನೀಡುತ್ತಾ ಬಂದಿದ್ದು ಪ್ರಸ್ತುತ ಸುಮಾರು 4000 ಕ್ಕಿಂತ ಹೆಚ್ಚಿನ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬೆಳಕು ಫೌಂಡೇಶನ್ ಮುಖಾಂತರ ಅನೇಕ ಮಂದಿ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ನೀಡುತ್ತಾ ಬಂದಿದ್ದಾರೆ. ಇವರ ಈ ಸಾಧನೆಯನ್ನು ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್ ಗುರುತಿಸಿ ಗೌರವಿಸಿದೆ.















