November 6, 2026
Uncategorized

ಸೌಜನ್ಯ ಪ್ರಕರಣ:ಮಹೇಶ್ ಶೆಟ್ಟಿ ತಿಮರೋಡಿ, ವಿಠಲ ಗೌಡ ವಿರುದ್ಧ:ಎಸ್‌ಐ ಟಿಗೆ ದೂರು ಸಲ್ಲಿಸಿದ ಹೈಕೋರ್ಟ್ ವಕೀಲ ಅಮೃತೇಶ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ
ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳನ್ನು ಮಂಗಳೂರು ಕಚೇರಿಯಲ್ಲಿ ನ.6ರಂದು ಭೇಟಿಯಾದ ಹೈಕೋರ್ಟ್ ವಕೀಲ ಅಮೃತೇಶ್‌ರವರು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ವಿಠಲ್ ಗೌಡ ವಿರುದ್ದ ದೂರು ಸಲ್ಲಿಸಿದ್ದಾರೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ಹಾಗೂ ವಿಠಲ ಗೌಡ ಅವರು ಸಂತೋಷ್ ರಾವ್ ಬಿಡುಗಡೆಗೆ ಅನುಕೂಲ ಮಾಡಿದ್ದಾರೆ. ಸಾರ್ವಜನಿಕ ಅಭಿಯೋಜಕರು, ಗೌರವಾನ್ವಿತ ನ್ಯಾಯಾಧೀಶರು ಹಾಗೂ ಇತರ ವಕೀಲರಿಗೆ ಹಣ ಪಾವತಿಸಲಾಗಿದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ವಿಠಲ ಗೌಡ ವಿರುದ್ಧ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ಸಾರ್ವಜನಿಕ ಅಭಿಯೋಜಕರಿಗೆ ಒಂದು ಕೋಟಿ ರೂ. ಪಾವತಿಸಲಾಗಿದೆ ಎಂದು ವಿಠಲ ಗೌಡ ಹೇಳಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಕೂಡ ಸಂತೋಷ್ ರಾವ್ ಬಿಡುಗಡೆಗೆ ಅನುಕೂಲವಾಗುವಂತೆ ವಕೀಲರಿಗೆ ಮತ್ತು ಇತರರಿಗೆ ಹಣ ಪಾವತಿಸಲಾಗಿದೆ ಎಂದು ಹೇಳಿರುವುದು ಕಂಡು ಬಂದಿದೆ. ಇದು ಅತ್ಯಂತ ಗಂಭೀರ ಸ್ವರೂಪದ ಆರೋಪವಾಗಿದೆ. ಅಂದರೆ ಭ್ರಷ್ಟ ವಿಧಾನಗಳನ್ನು ಅನುಸರಿಸುವ ಮೂಲಕ ಆರೋಪಿಯ ಖುಲಾಸೆ ಆಗುವಂತೆ ಮಾಡಲಾಗಿದೆಯ ಎಂಬ ಅನುಮಾನ ಇದೆ ಎಂದು ದೂರಿನಲ್ಲಿ ತಿಳಿಸಿರುವ ಅಮೃತೇಶ್ ಅವರು ವೈದ್ಯಕೀಯ ಮತ್ತು ವಿಧಿವಿಜ್ಞಾನ ಸಾಕ್ಷ್ಯಗಳ ಮರುಪರಿಶೀಲನೆ ಸೇರಿದಂತೆ ಎಸ್‌ಐಟಿಗೆ ಏಳು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

Related posts

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿನವರಾತ್ರಿ ಪ್ರಯುಕ್ತ ಹರಿಕಥೆ

Suddi Udaya

ಮುಂಡೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ : ಸಂಘ ರೂ.2.03 ಲಕ್ಷ ಲಾಭದಲ್ಲಿ ಮುನ್ನಡೆಯುತ್ತಿದೆ: ಯಾದವ ಕುಲಾಲ್

Suddi Udaya
error: Content is protected !!