ಉಜಿರೆ: ಶ್ರೀ ದುರ್ಗಾ ವುಡ್ ಇಂಡಸ್ಟ್ರೀಸ್‌ನಲ್ಲಿ ನ.4ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಹೆಜ್ಜೇನು ದಾಳಿ ನಡೆಸಿದ್ದು, ಸಂಸ್ಥೆಯ ಎಂಟು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಓರ್ವ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಂಸ್ಥೆಯ ಮಾಲಕ ಪುರುಷೋತ್ತಮ ಆಚಾರ್ಯ ಅವರು ಮಾಹಿತಿ ನೀಡಿದ್ದಾರೆ.














