November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳೆಂಜದಲ್ಲಿ ಪ್ರಜಾ ಆಂದೋಲನ ಸಭೆ

ಬೆಳ್ತಂಗಡಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಯೋಜನೆಯಡಿ, ಕಳೆಂಜ ಗ್ರಾಮ ಮಟ್ಟದ ‘ಪ್ರಜಾಸೇವಾ ಆಂದೋಲನ’ ಸಭೆಯು ನ.7ರಂದು ಕಳೆಂಜ ಗ್ರಾಮದ ಕಾರ್ಯತ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು, “ರಾಜ್ಯ ಸರ್ಕಾರವು ಪ್ರತಿ ತಿಂಗಳು ನಾಲ್ಕು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಈ ರೀತಿಯ ವಿಶೇಷ ಸಭೆಗಳನ್ನು ಆಯೋಜಿಸಿ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸುತ್ತಿದೆ. ನಮ್ಮ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆಯೇ ಇಂತಹ ಮಾದರಿ ಜನಸ್ಪಂದನಾ ಸಭೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇನ್ನು ಮುಂದೆ ಸಭೆಗಳು ನಡೆಯುವ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ದೊರೆಯುವಂತಾಗಲು, ಆಯಾ ಗ್ರಾಮ ಪಂಚಾಯತ್‌ಗಳಿಗೆ ಮುಂಚಿತವಾಗಿಯೇ ಮಾಹಿತಿ ನೀಡಬೇಕು,” ಎಂದು ಸ್ಥಳದಲ್ಲಿದ್ದ ತಹಶೀಲ್ದಾರರಿಗೆ ಶಾಸಕರು ಸೂಚನೆ ನೀಡಿದರು.

ರಾಜ್ಯ ಸರಕಾರ ಗ್ರಾಮ ಪಂಚಾಯತ್ ಚುನಾವಣೆ ನಡೆಸದೆ ಇರುವುದರಿಂದ 15 ನೇ ಹಣಕಾಸು ಯೋಜನೆಯ ಅನುದಾನ ಬಾರದೆ ಅಭಿವೃದ್ಧಿಗೆ ಸಂಕಷ್ಟ ವಾಗಿದೆ ಎಂದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಎಸ್. ಎನ್. ನರಗುಂದ ಅವರು, “ನಾಗರಿಕರು ತಮ್ಮ ಯಾವುದೇ ಸಮಸ್ಯೆಗಳಿದ್ದರೂ ಅಗತ್ಯ ದಾಖಲೆಗಳೊಂದಿಗೆ ಈ ಸಭೆಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಸ್ವೀಕೃತವಾದ ಅರ್ಜಿಗಳನ್ನು ತಕ್ಷಣವೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನಿಸಿ, ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಅರ್ಜಿಗಳ ಪ್ರಗತಿ ಹಾಗೂ ವಿಲೇವಾರಿ ಕುರಿತು ಸ್ವತಃ ಜಿಲ್ಲಾಧಿಕಾರಿಗಳೇ ಪ್ರತಿ ಬುಧವಾರ ಪರಿಶೀಲನೆ ನಡೆಸಿ ಮಾಹಿತಿ ಪಡೆಯಲಿದ್ದಾರೆ. ಆದ್ದರಿಂದ ಸಾರ್ವಜನಿಕರು ಈ ಯೋಜನೆಯ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು,” ಎಂದು ಕರೆ ನೀಡಿದರು.

21 ದಿನಗಳಲ್ಲಿ ಅರ್ಜಿಗಳ ವಿಲೇವಾರಿ
ಇದೇ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಗಣೇಶ್ ಶೆಟ್ಟಿ ಅವರು, ಸಭೆಯಲ್ಲಿ ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಅರ್ಜಿಗೂ ಅಧಿಕೃತ ಸ್ವೀಕೃತಿ ಪ್ರತಿಯನ್ನು ನೀಡಲಾಗುತ್ತದೆ. ತದನಂತರ ಮುಂದಿನ 21 ದಿನಗಳ ಒಳಗಾಗಿ ಆಯಾ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಕಡ್ಡಾಯವಾಗಿ ನಿರ್ದೇಶನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ.ಯತೀಶ್ ಕುಮಾರ್ ಎಂ. ಎಸ್., ಕಾರ್ಯದರ್ಶಿ ಹೊನ್ನಪ್ಪ ಗೌಡ, ಗ್ರಾಮ ಆಡಳಿತ ಅಧಿಕಾರಿ ಪೃಥ್ವಿರಾಜ್ ಪಿ. ಶೆಟ್ಟಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಅಂಬರೀಷ್ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಸಭೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದಲ್ಲಿ ಅನಂತನೊಂಪಿ ವಿಶೇಷ ಪೂಜೆ

Suddi Udaya

ಖೋಟಾನೋಟು ಪತ್ತೆ ಪ್ರಕರಣ: ಗುರುವಾಯನಕೆರೆ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” : ದೇಶಾದ್ಯಂತ ಹೆಚ್ಚುತ್ತಿದೆ ಸ್ವಚ್ಛತೆಯ ಜಾಗೃತಿ: ಪ್ರತಾಪಸಿಂಹ ನಾಯಕ್‌

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya
error: Content is protected !!