November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ನ. 8ರಂದು ಬಳಂಜದಲ್ಲಿ ಕೆ. ವಸಂತ ಸಾಲಿಯಾನ್, ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಹುಟ್ಟೂರ ಪೌರ ಸನ್ಮಾನ

ಬಳಂಜ: ಊರಿನ ಸರ್ವತೋಮುಖ ಅಭಿವೃದ್ಧಿಗೆ ಐದು ದಶಕಗಳಿಗೂ ಹೆಚ್ಚು ಕಾಲ ಅಮೂಲ್ಯ ಕೊಡುಗೆ ನೀಡಿರುವ ಇಬ್ಬರು ಹಿರಿಯ ಸಾಧಕರಾದ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವ ಮಾರ್ಗದರ್ಶಕರಾದ ಕೆ. ವಸಂತ ಸಾಲಿಯಾನ್ ಕಾಪಿನಡ್ಕ ಮತ್ತು ತಾ.ಪಂ ಮಾಜಿ ಸದಸ್ಯರು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಹೆಚ್. ಧರ್ಣಪ್ಪ ಪೂಜಾರಿ ಅವರಿಗೆ ನ. 8ರಂದು ಬಳಂಜ ಶಾಲೆಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಹುಟ್ಟೂರ ಪೌರ ಸನ್ಮಾನ ನೀಡಿ ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಕಳೆದ ಐದು ದಶಕಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಈ ಇಬ್ಬರು ಹಿರಿಯರು, ತಮ್ಮ ದೂರದೃಷ್ಟಿ, ಸಮಾಜಮುಖಿ ಚಿಂತನೆ, ನಿಸ್ವಾರ್ಥ ಸೇವೆ ಹಾಗೂ ಅದ್ಭುತ ಸಂಘಟನಾ ಸಾಮರ್ಥ್ಯದ ಮೂಲಕ ಬಳಂಜ ಗ್ರಾಮದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಇವರ ಅನುಪಮ ಸೇವೆ ಮತ್ತು ಸಾಧನೆಯನ್ನು ಗುರುತಿಸಿ, ಹುಟ್ಟೂರಿನ ಜನತೆಯ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಲಾಗುತ್ತಿದೆ.

ಯುವ ಉದ್ಯಮಿ ಹಾಗೂ ಅಮೃತ ಮಹೋತ್ಸವ ಸಮಿತಿಯ ಸಂಚಾಲಕ ಅಶ್ವಥ್ ಹೆಗ್ಡೆ ಅವರ ನೇತೃತ್ವದಲ್ಲಿ ನಡೆಯುವ ಈ ವಿಶೇಷ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಯು.ಟಿ. ಖಾದರ್, ಆಳ್ವಾಸ್ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವ, ಶಾಸಕ ಹರೀಶ್ ಪೂಂಜ, ಸಂಸದ ಬ್ರಿಜೇಶ್ ಚೌಟ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಎಸ್‌ಕೆಡಿಆರ್‌ಡಿಪಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ವಿದ್ವತ್ ಕಾಲೇಜಿನ ಕಾರ್ಯದರ್ಶಿ ಪ್ರಜ್ವಲ್ ರೈ, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ಕೆ.ಎಸ್., ಬ್ರೈಟ್ ಹೊರಿಝನ್ ಸ್ಕೂಲ್ ಅಧ್ಯಕ್ಷ ಡಾ. ಶರತ್ ಗೋರೆ, ಡಾ. ಹೇಮಂತ್ ರೈ ಮನವಳಿಕೆಗುತ್ತು, ಉಮಾ ಬಾಲಕೃಷ್ಣ ಹೆಗ್ಡೆ ಮಂಗಳೂರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ ವೈಭವಪೂರ್ಣ ಮೆರವಣಿಗೆಯೊಂದಿಗೆ ಪೌರ ಸನ್ಮಾನ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ನೃತ್ಯನಿಕೇತನ ಕೊಡವೂರು ತಂಡದಿಂದ ‘ನೃತ್ಯ ಸಿಂಚನ’, ಅರೆಹೊಳೆ ಪ್ರತಿಷ್ಠಾನದ ವತಿಯಿಂದ ‘ಬಾರ್ಕೂರಿನ ಹಡಗು’ ಸಾಂಸ್ಕೃತಿಕ ಪ್ರಸ್ತುತಿ ಹಾಗೂ ತುಳು ನಾಟಕ ‘ಕಾಡಗಗ್ಗರ’ ಪ್ರದರ್ಶನಗೊಳ್ಳಲಿದೆ. ಇದೇ ಸಂದರ್ಭದಲ್ಲಿ ‘ಅಮೃತ ಸಿಂಧು’ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಗುವುದು.

ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಬಳಂಜ ಗ್ರಾಮವು ಹಬ್ಬದ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಈ ಐತಿಹಾಸಿಕ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾಗಲು ಊರಿನ ಹಾಗೂ ಪರವೂರಿನ ಬಂಧುಗಳು, ಅಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Related posts

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸನ್ಮಾನ, ಸಾಧನಾ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya
error: Content is protected !!