ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮ ನ.5ರoದು ಜರುಗಿತು.
ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಲಾವಣ್ಯ ಶೆಟ್ಟಿ ಅರ್ಕಜೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಸುಧಾಕರ ಸಾಲಿಯಾನ್, ಸಿ ಆರ್ ಪಿ ವಾರಿಜ, ಶಾಲಾ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಜಿ ಪಿ ಟಿ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಶುಭ, ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ, ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಸಹಶಿಕ್ಷಕಿ ಧವಲಾ ಎ ನಿರೂಪಿಸಿ, ಹಿರಿಯ ಶಿಕ್ಷಕಿ ಫಿಲೋಮಿನಾ ಲೋಬೋ ವಂದಿಸಿದರು.















