November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಕಾಂಗ್ರೆಸ್‌ಗೆ ಆಯ್ಕೆಯಾದ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿನಿಯರು

ಉಜಿರೆ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಇದರ ಆಶಯದಲ್ಲಿ ಪಿಲಿಕುಳ ವಿಜ್ಞಾನ ಕೇಂದ್ರ ಮಂಗಳೂರಿನಲ್ಲಿ ನಡೆದ 32ನೇ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಕಾಂಗ್ರೆಸ್ ನಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ)ದ 9ನೇ ತರಗತಿಯ ವಿದ್ಯಾರ್ಥಿನಿಯರಾದ ಪೂರ್ವಿ ವಿ. ಮತ್ತು ಪದ್ಮಜಾ ಹೆಗ್ಡೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆ ಶಾಲೆಗೆ ಹೆಮ್ಮೆಯ ಸಂಗತಿಯಾಗಿದ್ದು, ಮಾರ್ಗದರ್ಶಕ ಶಿಕ್ಷಕಿಯಾದ ಧನ್ಯವತಿ ಕೆ. ಅವರ ಮಾರ್ಗದರ್ಶನದಲ್ಲಿ ಈ ಯಶಸ್ಸು ಸಾಧ್ಯವಾಗಿದೆ.

ವಿದ್ಯಾರ್ಥಿನಿಯರ ಸಾಧನೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Related posts

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya
error: Content is protected !!