November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ಯಲ್ಲಿ ನ.7ರಂದು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಡಾ. ಹಂಪೇಶ್ ಕೆ.ಎಸ್. ಅವರು ಆಗಮಿಸಿದ್ದರು.

ಸೃಜನಾ ಜೆ.ಎನ್. ಮುಖ್ಯ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಅನ್ವಿತಾ ಸುವರ್ಣ ದೀಪಾವಳಿ ಹಬ್ಬದ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿ ಡಾ. ಹಂಪೇಶ್ ಕೆ.ಎಸ್. ಮಾತನಾಡಿ, ದೀಪಾವಳಿಯು ಕೇವಲ ಬೆಳಕಿನ ಹಬ್ಬವಲ್ಲ; ಅಜ್ಞಾನವೆಂಬ ಕತ್ತಲೆಯನ್ನು ದೂರ ಮಾಡಿ ಜ್ಞಾನವೆಂಬ ಬೆಳಕನ್ನು ಪಸರಿಸುವ ಹಬ್ಬವಾಗಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಜ್ಞಾನ, ಮಾನವೀಯತೆ, ಸಕಾರಾತ್ಮಕ ಚಿಂತನೆ ಹಾಗೂ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು.ಸುರಕ್ಷಿತ ದೀಪಾವಳಿ ಆಚರಿಸಿ ಎಂದು ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ಎನ್ ಮಾತನಾಡಿ ದೀಪಾವಳಿ ಹಬ್ಬದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸುವುದರ ಜೊತೆಗೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗೌರವಿಸಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನೃತ್ಯ, ಗಾಯನ ಸೇರಿದಂತೆ ವಿವಿಧ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸ್ಪೂರ್ತಿ ನಿರೂಪಿಸಿದರು. ಅಕ್ಷರ ಹಳೇಮನೆ ಸ್ವಾಗತಿಸಿದರು. ಆಧ್ಯಾ ರಾವ್ ವಂದಿಸಿದರು. ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya
error: Content is protected !!