November 7, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಜೂರು ಹಝ್ರತ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ವತಿಯಿಂದ ಪಿಡಿಒ ಮೋಹನ್ ಬಂಗೇರರಿಗೆ‌ ಅಭಿನಂದನೆ

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿ ಯಾಗಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಪ್ರಸ್ತುತ ಬೇರೆಡೆಗೆ ವರ್ಗಾವಣೆಗೊಂಡು ತೆರಳುತ್ತಿರುವ ಮೋಹನ್ ಬಂಗೇರ ಅವರಿಗೆ ಹಝ್ರತ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಸಮಿತಿಯಿಂದ ಅಭಿನಂದನೆ ಮತ್ತು ಶುಭ ಹಾರೈಕೆ ಮಾಡಲಾಯಿತು.

ತಮ್ಮ ಅಧಿಕಾರ ಅವಧಿಯಲ್ಲಿ ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಅತ್ಯಂತ ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ಅನುಷ್ಠಾನಗೊಳಿಸಿ ವಿಶೇಷವಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಕಾಜೂರು ದರ್ಗಾ ಹಾಗೂ ಸಾರ್ವಜನಿಕರೊಂದಿಗೆ ತೋರಿದ ಸೌಹಾರ್ದಯುತ ನಡವಳಿಕೆ, ಸಹಕಾರ ಮತ್ತು ಸಕರಾತ್ಮಕ ಸ್ಪಂದನೆಗೆ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಯು ಇಬ್ರಾಹಿಂ ಅಧ್ಯಕ್ಷರು, ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್ ಪ್ರಧಾನ ಕಾರ್ಯದರ್ಶಿ, ಡಿ.ವೈ ಉಮರ್, ಕೋಶಾಧಿಕಾರಿ, ಬಶೀರ್ ಅಹ್ಸನಿ ಉಪಾಧ್ಯಕ್ಷರು, ಸದಸ್ಯರಾದ ಬದ್ರುದ್ದೀನ್, ಅಬ್ದುಲ್ ಸಲೀಂ, ಮೊಹಮ್ಮದ್ ಸಾಕಾಫಿ, ಶರೀಫ್ ಸಹದಿ, ಹನೀಫ್ ಕೆ ಯು., ಯಾಕೂಬ್ ಎನ್ .ಎಂ., ಕೆ.ಕೆ ಹಕೀಂ ಮೊದಲಾದವರು ಉಪಸ್ಥಿತರಿದ್ದರು.

Related posts

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya
error: Content is protected !!