ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಳದಂಗಡಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕಾಲೊಜಿ ಮಂಗಳೂರು, ಯೆನೆಪೋಯ ಮೆಡಿಕಲ್, ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ ಸುವರ್ಣ ಕ್ಯಾನ್ಸರ್ ಸಂಬಂಧಿಸಿದ ಆರೋಗ್ಯ ತಪಾಸಣೆ, ಕಣ್ಣಿನ, ಎಲುಬು, ಕೀಲು ಮೂಳೆಚಿಕಿತ್ಸೆ ಮತ್ತು ಸ್ತ್ರೀ ರೋಗಗಳ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ನ.22ರಂದು ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ತಿಳಿಸಿದ್ದಾರೆ.








