November 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ ಕಾಲೇಜು ಉತ್ಸವ

ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಅಂತರ ಕಾಲೇಜು ಉತ್ಸವ ನೆಕ್ಸೊರಾ ಕಾಲೇಜು ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಯಿತು. ಎಲ್ಲಾ ಪಿಯು ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದ ಈ ಉತ್ಸವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಮಾಧವ ಎಂ. ವಹಿಸಿದ್ದರು. ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಗೌರವಾನ್ವಿತ ಅತಿಥಿಗಳಾಗಿ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಿಪುಲ್ ಕೆ., ಪೋಷಕ-ಶಿಕ್ಷಕ ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.

ಸಮಾರೋಪದ ಅಧ್ಯಕ್ಷತೆಯನ್ನು ಪ್ರೊ. ಮಾಧವ ಎಂ. ವಹಿಸಿದ್ದರು. ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕುಮಾರ್ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹಳೇ ವಿದ್ಯಾರ್ಥಿಗಳ ಸಂಘ, ಕಾಲೇಜು ಅಭಿವೃದ್ಧಿ ಸಮಿತಿ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!