ನಡ : ಮಂಜೊಟ್ಟಿ ರಝಾಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.7ರಂದು ಬೆಳ್ತಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಜರುಗಿತು.
ಮುಖ್ಯ ಅಥಿತಿ ಶಿಕ್ಷಣ ಸಂಯೋಜಕಿ ಚೇತನಾಕ್ಷಿ ಮಾತನಾಡಿ ವಿದ್ಯಾರ್ಥಿಗಳಿಗೆ ಸ್ಪರ್ಧಾಮನೋಭಾವವನ್ನು ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸ್ಟಾರ್ ಲೈನ್ ಸಂಸ್ಥೆಯ ಕಾರ್ಯದರ್ಶಿ ಸಯ್ಯದ್ ಅಯೂಬ್ ವಹಿಸಿ ಮಾತನಾಡಿ ಪ್ರತಿಯೊಂದು ವಿದ್ಯಾರ್ಥಿಯಲ್ಲೂ ಪ್ರತಿಭೆ ಇದೆ, ಆ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಯೇ ಪ್ರತಿಭಾ ಕಾರಂಜಿ ಎಂದು ಹೇಳುತ್ತಾ ಸ್ಪರ್ಧಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಂಗಾಡಿ ವಲಯ ಸಂಪನ್ಮೂಲ ವ್ಯಕ್ತಿ ರಮೇಶ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಅಮಿತಾನಂದ ಹೆಗ್ಡೆ, ಶಿಕ್ಷಕ ಸಂಘಗಳ ಪದಾಧಿಕಾರಿಗಳಾದ ವಿಕಾಸ್, ಗಣೇಶ್, ಜೋಸೆಫ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಸ್ವಾಗತಿಸಿ, ಸಹ ಶಿಕ್ಷಕಿಯರಾದ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು. ನುಸೈಬ ವಂದಿಸಿದರು.















