November 10, 2026
Uncategorized

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಣ್ಣು-ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಕಾರ್ಯಕ್ರಮ ಜರುಗಿತು. ಕನ್ನಡ ಒಕ್ಕೂಟದ ವತಿಯಿಂದ, ಕನ್ನಡ ಅಭಿಮಾನಿಗಳ ಸಹಕಾರದೊಂದಿಗೆ ಸತತ 3ನೇ ವರ್ಷವೂ ಈ ಜನಪರ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕನ್ನಡ ಕೂಟದ ಮಾಜಿ ಅಧ್ಯಕ್ಷರಾದ ಗುರುಪ್ರಸಾದ್ ಮಾಲಾಡಿ ಹಾಗೂ ಕೃಷ್ಣ ಮಾಲಾಡಿ ಅವರು ಉಪಸ್ಥಿತರಿದ್ದರು. ಆಸ್ಪತ್ರೆಯ ಪರವಾಗಿ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿರುವ ಡಾ. ರಮೇಶ್, ತಾಲೂಕು ಆಸ್ಪತ್ರೆಯ ಹೆರಿಗೆ ತಜ್ಞರಾದ ಡಾ. ವೆಂಕಟಸ್ವಾಮಿ, ಮೂಳೆ ತಜ್ಞರಾದ ಡಾ. ಸಹಾನ್ ಕುಮಾರ್ ಶೆಟ್ಟಿ ಹಾಗೂ ಆಸ್ಪತ್ರೆಯ ಶುಶ್ರೂಷಕರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ, ತಾಲೂಕು ಆಸ್ಪತ್ರೆಯ ಅತ್ಯುತ್ತಮ ಸ್ವಚ್ಛತೆ, ನಿರ್ವಹಣೆ ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಉತ್ತಮ ಚಿಕಿತ್ಸೆಯ ಬಗ್ಗೆ ಸಾರ್ವಜನಿಕರು ಮತ್ತು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಆಸ್ಪತ್ರೆಯ ವ್ಯವಸ್ಥೆಗೆ ತೀವ್ರ ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು ಕನ್ನಡ ಕೂಟದ ಪದಾಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸಿದರು.

Related posts

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!