November 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿಯರಿಂದ ಆರೋಗ್ಯ ಜಾಗೃತಿ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಮಾಜಕಾರ್ಯ ವಿಭಾಗದ ವತಿಯಿಂದ ಪುಂಜಾಲಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿಯರಿಗಾಗಿ ‘ಮುಟ್ಟಿನ ಋತು ಚಕ್ರ ಮತ್ತು ಹದಿಹರೆಯದ ಆರೋಗ್ಯ’ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ತಾಲ್ಲೂಕಿನ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮುಟ್ಟಿನ ಆರೋಗ್ಯ, ಮುಟ್ಟಿನ ಸಮಯದಲ್ಲಿ ಪಾಲಿಸಬೇಕಾದ ಸ್ವಚ್ಛತಾ ಕ್ರಮಗಳು ಹಾಗೂ ವೈಯಕ್ತಿಕ ಶುಚಿತ್ವದ ಕುರಿತು ಮಾಹಿತಿ ನೀಡಿ, ಹದಿಹರೆಯದಲ್ಲಿ ಕಂಡುಬರುವ ದೈಹಿಕ ಬದಲಾವಣೆಗಳು ಮತ್ತು ಉತ್ತಮ ಆರೋಗ್ಯ ಅಭ್ಯಾಸಗಳ ಮಹತ್ವವನ್ನು ವಿವರಿಸಿದರು.

ಮಡಂತ್ಯಾರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ರೂಪಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹದಿಹರೆಯದಲ್ಲಿ ಬಾಲಕಿಯರಲ್ಲಿ ಉಂಟಾಗುವ ದೈಹಿಕ ಹಾಗೂ ಭಾವನಾತ್ಮಕ ಬದಲಾವಣೆಗಳ ಕುರಿತು ವಿವರಿಸಿ, ಮುಟ್ಟಿನ ಸಂದರ್ಭದಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಅಗತ್ಯವನ್ನು ತಿಳಿಸಿದರು. ಆರೋಗ್ಯದ ಬಗ್ಗೆ ಸೂಕ್ತ ಕಾಳಜಿ ವಹಿಸುವಂತೆ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಸಮಾಜಕಾರ್ಯ ವಿದ್ಯಾರ್ಥಿಗಳಾದ ಪವಿತ್ರಾ ಮತ್ತು ನಿಶಾ ಅವರು ವಿದ್ಯಾರ್ಥಿನಿಯರಿಗೆ ಮುಟ್ಟಿನ ಆರೋಗ್ಯ ಹಾಗೂ ಹದಿಹರೆಯದವರ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಉಷಾ, ಅಂಗನವಾಡಿ ಶಿಕ್ಷಕಿ ಗೀತಾ, ಅಂಗನವಾಡಿ ಸಹಾಯಕಿ ನೀಲಮ್ಮ ಹಾಗೂ ವಿದ್ಯಾರ್ಥಿನಿಯರ ಪೋಷಕರು ಉಪಸ್ಥಿತರಿದ್ದರು. ಪ್ರಥಮ ವರ್ಷದ ಸಮಾಜಕಾರ್ಯ ಸ್ನಾತಕೋತ್ತರ ವಿದ್ಯಾರ್ಥಿನಿ ಮೌಲ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿನಿ ಅಶ್ವಿತಾ ವಂದಿಸಿದರು. ಉಜಿರೆಯ ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿದ್ಯಾರ್ಥಿನಿಯರು ಕಾರ್ಯಕ್ರಮವನ್ನು ನಡೆಸಿಕೊಟ್ಟರು

Related posts

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya
error: Content is protected !!