November 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ.15: ಕುಂಭಶ್ರೀ ಶಾಲಾ ಮತ್ತು ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ನ.15ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ (Old student Association) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಸಮ್ಮೇಳನದಲ್ಲಿ 1996ರಿಂದ 2026ರವರೆಗೆ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಸಂಸ್ಥೆಯೊಂದಿಗಿನ ತಮ್ಮ ವಿದ್ಯಾರ್ಥಿ ಜೀವನದ ಸವಿನೆನಪುಗಳನ್ನು ಮೆಲುಕು ಹಾಕಲು, ಹಳೆಯ ಸ್ನೇಹಿತರೊಂದಿಗೆ ಮತ್ತೊಮ್ಮೆ ಒಂದಾಗಿ ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳಲು ಇದೊಂದು ಸುಂದರ ಅವಕಾಶವಾಗಿದೆ.

ಆದ್ದರಿಂದ ಕುಂಭಶ್ರೀಯ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ನೇಹ ಸಮ್ಮಿಲನದಲ್ಲಿ ಭಾಗವಹಿಸಿ, ಅದೇ ರೀತಿ, ಡಿ.5ರಂದು ಸಂಸ್ಥೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ “ನಮ್ಮೂರ ಜಾತ್ರೆ – ಕುಂಭಶ್ರೀ ವೈಭವ” ಕಾರ್ಯಕ್ರಮವು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ. ಎಚ್., ಸಂಚಾಲಕ ಅಶ್ವಿತ್ ಕುಲಾಲ್ ಹಾಗೂ ಸಮಸ್ತ ಶಿಕ್ಷಕ ವೃಂದದವರು ಆತ್ಮೀಯವಾಗಿ ಆಹ್ವಾನಿಸುತ್ತಿದ್ದಾರೆ.

Related posts

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya
error: Content is protected !!