November 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಸರಣಿ ವಾಹನ ಅಪಘಾತ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಂಜಾನೆ ನ. 11 ರಂದು ಅಪಘಾತ ಸಂಭವಿಸಿದ್ದು ಸ್ಕೂಟರ್ ಸವಾರ ನಾವೂರಿನ ಸಂತೋಷ್ (32ವ) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಮತ್ತೊಂದು ಬೈಕ್ ಸವಾರ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33ವ) ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮಂಗಳೂರಿನಿಂದ ಚಿಕ್ಕಮಗಳೂರು ಕಡೆ ಹೋಗುತ್ತಿದ್ದ ಟಾಟಾ ಗೂಡ್ಸ್ ವಾಹನ ಹಾಗೂ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ಚಾಲಕ ನಿದಿರೆಯ ಮಂಪರಿನಲ್ಲಿದ್ದ ಎಂದು ತಿಳಿದು ಬಂದಿದ್ದು, ಮಂಗಳೂರಿನಲ್ಲಿ ಚಾಲಕ ಕೆಲಸ ಮಾಡುತ್ತಿದ್ದ ಸಂತೋಷ್ ಹಾಗೂ ಆರ್ವಿ ಪ್ರಿಂಟಿಂಗ್ ಪ್ರೆಸ್ ನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಸಾವನ್ನಪ್ಪಿದ್ದಾರೆ.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya
error: Content is protected !!