November 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೋಡುಕಲ್ಲು ಶ್ರೀ ಗಣೇಶ ಮಂದಿರದ ಸಂರಕ್ಷಣಾ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಾ. ರವೀಶ್ ಪಡುಮಲೆ

ಬೆಳ್ತಂಗಡಿ: ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳ ಸಮೀಪದ ಜೋಡುಕಲ್ಲಿನಲ್ಲಿ ಶ್ರೀ ಗಣೇಶ ಮಂದಿರದ ಸಂರಕ್ಷಣೆಗಾಗಿ ಕಳೆದ 15 ದಿನಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ಹಿಂದೂ ಕಾರ್ಯಕರ್ತರು ಹಾಗೂ ಭಕ್ತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಪುತ್ತೂರಿನ ಧಾರ್ಮಿಕ ಹಿತಚಿಂತಕ ಡಾ. ರವೀಶ್ ಪಡುಮಲೆ, ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡದ ಅಧ್ಯಕ್ಷ ದಾಮೋದರ ಪಾಟಾಳಿ ಹಾಗೂ ವಿಶ್ವ ಹಿಂದೂ ಪರಿಷದ್ ಬದಿಯಡ್ಕ ಪ್ರಖಂಡದ ಅಧ್ಯಕ್ಷ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಅವರು ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಜೋಡುಕಲ್ಲಿನಲ್ಲಿ ಹಲವು ವರ್ಷಗಳಿಂದ ಗಣೇಶ ಚತುರ್ಥಿ, ಶ್ರೀಕೃಷ್ಣ ಜನ್ಮಾಷ್ಟಮಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಈ ಸ್ಥಳದಲ್ಲಿ ನಿರ್ಮಿಸಲಾದ ಚಪ್ಪರವು ಲೋಕೋಪಯೋಗಿ ಇಲಾಖೆಗೆ ಸೇರಿದ ಭೂಮಿಯಲ್ಲಿದೆ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದ್ದು, ತೆರವುಗೊಳಿಸುವಂತೆ ನ್ಯಾಯಾಲಯದ ನಿರ್ದೇಶನ ಬಂದಿರುವುದು ಪ್ರಸ್ತುತ ಬೆಳವಣಿಗೆಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರು ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶ್ರೀ ಗಣೇಶ ಮಂದಿರದ ಸಂರಕ್ಷಣೆ ಮತ್ತು ಧಾರ್ಮಿಕ ಪರಂಪರೆಯ ಉಳಿವಿಗಾಗಿ ನಿರಂತರ ಭಜನೆ, ಪ್ರಾರ್ಥನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ.

ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರಿನ ಕಾರ್ಯಕರ್ತರು ಶ್ರೀ ಗಣೇಶ ಮಂದಿರದ ಧಾರ್ಮಿಕ ಮಹತ್ವ, ಸ್ಥಳೀಯ ಭಕ್ತರ ಭಾವನೆಗಳು ಹಾಗೂ ತಲೆಮಾರುಗಳಿಂದ ನಡೆದುಕೊಂಡು ಬರುತ್ತಿರುವ ಧಾರ್ಮಿಕ ಪರಂಪರೆಯ ಸಂರಕ್ಷಣೆಯ ಅಗತ್ಯವನ್ನು ಒತ್ತಿಹೇಳಿದರು. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಸೂಕ್ತ ಗೌರವ ದೊರೆಯಬೇಕು. ಭಕ್ತರ ನಂಬಿಕೆ ಮತ್ತು ಧಾರ್ಮಿಕ ಪರಂಪರೆಗೆ ಧಕ್ಕೆಯಾಗದಂತೆ ಕಾನೂನುಬದ್ಧವಾಗಿ ಹಾಗೂ ನ್ಯಾಯಯುತವಾಗಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ಧಾರ್ಮಿಕ ಶ್ರದ್ಧೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆ ಪ್ರತಿಯೊಬ್ಬ ಹಿಂದೂವಿನ ಜವಾಬ್ದಾರಿಯಾಗಿದೆ. ಜೋಡುಕಲ್ಲಿನ ಭಕ್ತರು ನಡೆಸುತ್ತಿರುವ ಈ ಹೋರಾಟಕ್ಕೆ ಪುತ್ತೂರಿನ ಹಿಂದೂ ಕಾರ್ಯಕರ್ತರು ಸಂಪೂರ್ಣ ಬೆಂಬಲ ವ್ಯಕ್ತಪಡಿಸುವ ಮೂಲಕ ಧಾರ್ಮಿಕ ಪರಂಪರೆಯ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಡಾ. ರವೀಶ್ ಪಡುಮಲೆಯವರು ಅಭಿಪ್ರಾಯ ಪಟ್ಟರು.

Related posts

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya
error: Content is protected !!