November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್–2026ಕ್ಕೆ ತಲ್ಹತ್ ಎಂ.ಜಿ. ಸವಣಾಲು ನಾಮನಿರ್ದೇಶನ

ಬೆಳ್ತಂಗಡಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಅವಕಾಶಗಳನ್ನು ಕಲ್ಪಿಸುವ ಮೂಲಕ ಕಳೆದ ಸುಮಾರು 17 ವರ್ಷಗಳಿಂದ ಶೈಕ್ಷಣಿಕ, ಸಾಮಾಜಿಕ ಹಾಗೂ ವೃತ್ತಿಪರ ತರಬೇತಿ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಸವಣಾಲು ಗ್ರಾಮದ ತಲ್ಹತ್ ಎಂ.ಜಿ. ಸವಣಾಲು ಅವರು ಪ್ರತಿಷ್ಠಿತ ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್–2026ಕ್ಕೆ ನಾಮನಿರ್ದೇಶನಗೊಂಡಿದ್ದಾರೆ.

ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ದೂರದೃಷ್ಟಿಯನ್ನು ಪರಿಗಣಿಸಿ Education, Skill Development & Entrepreneurship Excellence Award–2026 ವಿಭಾಗದಲ್ಲಿ ಇವರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ಸ್ವರ್ಣ ಭಾರತ್ ಫೌಂಡೇಶನ್ (ರಿ.), ಬೆಂಗಳೂರು ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ತಲ್ಹತ್ ಅವರು ಶಿಕ್ಷಣದ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಉದ್ದೇಶದಿಂದ ಅನುಗ್ರಹ ಎಜುಕೇಶನ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (ರಿ.) ಸ್ಥಾಪಿಸಿ, ಅದರ ಅಧೀನದಲ್ಲಿ ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜನ್ನು ಆರಂಭಿಸಿದ್ದಾರೆ. ಶಿಕ್ಷಕರಾಗಿ, ಪ್ರಾಂಶುಪಾಲರಾಗಿ ಹಾಗೂ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿರುವ ಇವರು, ಸಂಸ್ಥೆಯ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ ಮಂಗಳೂರಿನ ಮುಡಿಪಿನಲ್ಲಿಯೂ ಶಾಖೆಯನ್ನು ಆರಂಭಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು, ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದ ಯುವಜನರು ಹಾಗೂ SSLC ಮತ್ತು PUC ಪರೀಕ್ಷೆಗಳಲ್ಲಿ ನಿರೀಕ್ಷಿತ ಯಶಸ್ಸು ಪಡೆಯದವರಿಗೆ ಮರುಶಿಕ್ಷಣದ ಅವಕಾಶ ಕಲ್ಪಿಸುವುದು ಇವರ ಪ್ರಮುಖ ಉದ್ದೇಶವಾಗಿದೆ. ತಾಂತ್ರಿಕ, ವೃತ್ತಿಪರ, ಪ್ರೊಫೆಷನಲ್ ಡಿಪ್ಲೊಮಾ ಹಾಗೂ ಉದ್ಯೋಗಮುಖಿ ಕೌಶಲ್ಯ ತರಬೇತಿಗಳ ಮೂಲಕ ಯುವಜನರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಾಯೋಗಿಕ ಜ್ಞಾನ, ಸ್ವಯಂ ಉದ್ಯೋಗದ ಮಾರ್ಗದರ್ಶನ ಹಾಗೂ ದೇಶ-ವಿದೇಶಗಳಲ್ಲಿ ಉದ್ಯೋಗ ಪಡೆಯಲು ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ.

ವೃತ್ತಿಪರ ಶಿಕ್ಷಣ ಕ್ಷೇತ್ರದ ಸೇವೆಯನ್ನು ಗುರುತಿಸಿ 2018ರಲ್ಲಿ MEHAZ Foundation NGO ವತಿಯಿಂದ ಬೆಂಗಳೂರಿನಲ್ಲಿ Best Vocational Education Service Award ನೀಡಿ ಗೌರವಿಸಲಾಗಿತ್ತು. ಅಲ್ಲದೆ, ಮುಂಬೈಯ Indian Technical Education Board ವತಿಯಿಂದ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ Best Institution Award ಲಭಿಸಿದೆ.

ಶೈಕ್ಷಣಿಕ ಕ್ಷೇತ್ರದ ಜೊತೆಗೆ ವಿವಿಧ ಸಂಘ-ಸಂಸ್ಥೆಗಳ ಮೂಲಕ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಯುವಜನರ ಸಬಲೀಕರಣ ಮತ್ತು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದಾರೆ.

ಬೆಳ್ತಂಗಡಿಯಲ್ಲಿ ಇಂಟಿಗ್ರೇಟೆಡ್ ಪದವಿ ಶಿಕ್ಷಣ ಸಂಸ್ಥೆಯ ಕನಸು

ಮುಂದಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪದವಿ ಶಿಕ್ಷಣದ ಜೊತೆಗೆ ತಾಂತ್ರಿಕ ಶಿಕ್ಷಣ, ವೃತ್ತಿಪರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಉದ್ಯೋಗ ಮಾರ್ಗದರ್ಶನವನ್ನು ಒಳಗೊಂಡ ಗುಣಮಟ್ಟದ ಇಂಟಿಗ್ರೇಟೆಡ್ ಪದವಿ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ದೂರದ ನಗರಗಳನ್ನು ಅವಲಂಬಿಸದೆ ತಮ್ಮದೇ ತಾಲೂಕಿನಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬೇಕು ಹಾಗೂ ಉದ್ಯೋಗ ಹುಡುಕುವವರಾಗಿರದೆ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ ಹೊಂದಬೇಕು ಎಂಬುದು ಇವರ ಆಶಯವಾಗಿದೆ.

ವಿದ್ಯಾರ್ಥಿಯ ಸೋಲು ಅಂತಿಮವಲ್ಲ, ಅವರಿಗೆ ಮತ್ತೊಂದು ಅವಕಾಶ ನೀಡುವುದೇ ನಿಜವಾದ ಶಿಕ್ಷಣ ಸೇವೆ. ಉದ್ಯೋಗ ಹುಡುಕುವವರನ್ನು ಉದ್ಯೋಗ ಸೃಷ್ಟಿಸುವವರನ್ನಾಗಿ ರೂಪಿಸುವುದೇ ನನ್ನ ಶಿಕ್ಷಣದ ಕನಸು ಎಂಬ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ತಲ್ಹತ್ ಅವರ ಸಾಧನೆ ಹಾಗೂ ಭವಿಷ್ಯದ ಯೋಜನೆಗಳು ಬೆಳ್ತಂಗಡಿ ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಹೊಸ ಭರವಸೆ ಮೂಡಿಸಿವೆ.

ಈ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಡೆಯಲಿದ್ದು, ಅಂದು ತಲ್ಹತ್ ಎಂ.ಜಿ. ಸವಣಾಲು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವರ್ಣ ಭಾರತ್ ಫೌಂಡೇಶನ್‌ನ ಡಾ. ರಜನಿ ಸಂತೋಷ್ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya
error: Content is protected !!