November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆ ಕಾಮಗಾರಿ ವಿಳಂಬ, ಅಸಮರ್ಪಕ ದುರಸ್ತಿ ವಿರುದ್ಧ SDPI ನಿಯೋಗದಿಂದ ಲೋಕೋಪಯೋಗಿ ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಹಲವು ವರ್ಷಗಳಿಂದ ಹದಗೆಟ್ಟಿರುವ ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆಯ ದುರಸ್ತಿಗೆ ಆಗ್ರಹಿಸಿ SDPI ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಬಳಿಕ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದ್ದರೂ, ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದಲ್ಲದೆ, ಹಲವು ಕಡೆಗಳಲ್ಲಿ ಅಸಮರ್ಪಕವಾಗಿ ಹಾಗೂ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಗಳು ವ್ಯಕ್ತವಾಗಿವೆ.

ಗುತ್ತಿಗೆದಾರರು ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೆ ವಿಳಂಬ ಮಾಡುತ್ತಿರುವುದು ಹಾಗೂ ಗುಣಮಟ್ಟದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ಕ್ಷೇತ್ರ ಸಮಿತಿಯ ನಿಯೋಗವು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗೋಪಾಲ್ ಹಾಗೂ ಇಂಜಿನಿಯರ್ ಸೂರಜ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಈ ಸಂದರ್ಭದಲ್ಲಿ ರಸ್ತೆ ದುರಸ್ತಿ ಕಾಮಗಾರಿಯಲ್ಲಿನ ವಿಳಂಬ, ಅಸಮರ್ಪಕ ನಿರ್ವಹಣೆ ಹಾಗೂ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಯಿತು. ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದರ ಜೊತೆಗೆ, ನಿಗದಿತ ಗುಣಮಟ್ಟ ಮತ್ತು ವೈಜ್ಞಾನಿಕ ಮಾನದಂಡಗಳನ್ನು ಪಾಲಿಸಿ ದುರಸ್ತಿ ಕಾರ್ಯ ಕೈಗೊಳ್ಳುವಂತೆ ನಿಯೋಗವು ಒತ್ತಾಯಿಸಿತು.

ಜನರ ದೀರ್ಘಕಾಲದ ಹೋರಾಟದ ಫಲವಾಗಿ ಆರಂಭಗೊಂಡಿರುವ ಕಾಮಗಾರಿ ಕೇವಲ ಹೆಸರಿಗಷ್ಟೇ ಸೀಮಿತವಾಗದೆ, ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು. ಕಾಮಗಾರಿಯ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ನಿರಂತರ ನಿಗಾ ವಹಿಸಿ ಗುತ್ತಿಗೆದಾರರಿಂದ ಸಮರ್ಪಕವಾಗಿ ಕೆಲಸ ಮಾಡಿಸಬೇಕು ಎಂದು ನಿಯೋಗ ಆಗ್ರಹಿಸಿತು.

ನಿಯೋಗದಲ್ಲಿ ಮಾಜಿ ಪಂಚಾಯತ್ ಸದಸ್ಯ ಕೆ.ಎಸ್. ಅಬ್ದುಲ್ಲಾ ಕರಾಯ, SDPI ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಹಾಗೂ ಕೋಶಾಧಿಕಾರಿ ಸಾಲಿಮದ್ದಡ್ಕ ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya
error: Content is protected !!