November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಚಿತ್ರಕಲಾ ಸ್ಪರ್ಧೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಉದಯವಾಣಿ ವತಿಯಿಂದ ಆಯೋಜಿಸಲಾದ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ.) ಶಾಲೆಯ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ನ.1ರಂದು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆದ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಚಿತ್ರಕಲಾ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಸ್ಪರ್ಧೆಯ ಸಬ್ ಜೂನಿಯರ್ ವಿಭಾಗದಲ್ಲಿ ಸಾನಿಧ್ಯ ಮಯ್ಯ ತೃತೀಯ ಸ್ಥಾನವನ್ನು ಗಳಿಸಿದರೆ, ತೃಷಿಕಾ ಎ.ಎಸ್. ಹಾಗೂ ಆದ್ಯಾ ಪಿ. ಸಮಾಧಾನಕರ ಬಹುಮಾನಕ್ಕೆ ಭಾಜನರಾಗಿದ್ದಾರೆ. ಜೂನಿಯರ್ ವಿಭಾಗದಲ್ಲಿ ಸಾನಿಧ್ಯ ಹೆಬ್ಬಾರ್ ಸಮಾಧಾನಕರ ಬಹುಮಾನವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇಂತಹ ಸೃಜನಶೀಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಇನ್ನಷ್ಟು ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದ್ದಾರೆ.

Related posts

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya
error: Content is protected !!