November 12, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಸರಕಾರಿ ನಿಗಮ-ಮಂಡಳಿಗಳ ನಿರ್ದೇಶಕರಾಗಿ ಪಿ.ಟಿ. ಸೆಬಾಸ್ಟಿಯನ್ ಹಾಗೂ ಅಬ್ದುಲ್ ರಹಿಮಾನ್ ಆಯ್ಕೆ

ಬೆಳ್ತಂಗಡಿ: ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ನೂತನ ನಿರ್ದೇಶಕರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ತಾಲೂಕಿನ ಪ್ರಮುಖ ಮುಖಂಡರಾದ ಪಿ.ಟಿ. ಸೆಬಾಸ್ಟಿಯನ್ ಕಳೆಂಜ ಹಾಗೂ ಅಬ್ದುಲ್ ರಹಿಮಾನ್ ಪಡ್ಪು ಅವರಿಗೆ ಮಹತ್ವದ ಜವಾಬ್ದಾರಿ ಲಭಿಸಿದೆ.

ಪಿ.ಟಿ. ಸೆಬಾಸ್ಟಿಯನ್ ಕಳೆಂಜ (ಕರ್ನಾಟಕ ಫಿಶರೀಸ್ ಡೆವಲಪ್‌ಮೆಂಟ್ ಬೋರ್ಡ್): ಕರ್ನಾಟಕ ಫಿಶರೀಸ್ ಡೆವಲಪ್‌ಮೆಂಟ್ ಬೋರ್ಡ್‌ನ ನಿರ್ದೇಶಕರಾಗಿ ಪಿ.ಟಿ. ಸೆಬಾಸ್ಟಿಯನ್ ಕಳೆಂಜ ಅವರು ನೇಮಕಗೊಂಡಿದ್ದಾರೆ. ಪ್ರಸ್ತುತ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿರುವ ಇವರು, ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ತಮ್ಮ ಅಪಾರ ಸಮಾಜ ಸೇವೆಯ ಮೂಲಕ ತಾಲೂಕಿನಲ್ಲಿ ಗುರುತಿಸಿಕೊಂಡಿದ್ದಾರೆ.

ಅಬ್ದುಲ್ ರಹಿಮಾನ್ ಪಡ್ಪು (ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ): ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ ನಿಯಮಿತದ ನಿರ್ದೇಶಕರಾಗಿ ಅಬ್ದುಲ್ ರಹಿಮಾನ್ ಪಡ್ಪು ಅವರು ನೇಮಕವಾಗಿದ್ದಾರೆ. ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು, ಮಡಂತ್ಯಾರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿ ಮತ್ತು ಮಡಂತ್ಯಾರು ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ.
ತಾಲೂಕಿನ ಇಬ್ಬರು ಸಕ್ರಿಯ ನಾಯಕರಿಗೆ ರಾಜ್ಯ ಮಟ್ಟದ ಮಂಡಳಿಗಳಲ್ಲಿ ಅವಕಾಶ ಸಿಕ್ಕಿರುವುದಕ್ಕೆ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕ ವಲಯದಿಂದ ಹರ್ಷ ವ್ಯಕ್ತವಾಗಿದೆ.

Related posts

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ಲಾರಿ-ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!