November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿವರದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಲಾಯಿಲ ಶಕ್ತಿ ಕೇಂದ್ರದ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ಭಾಗವಾಗಿ ಲಾಯಿಲ ಶಕ್ತಿ ಕೇಂದ್ರದ ವತಿಯಿಂದ ಬೃಹತ್ ಪ್ರತಿಭಟನೆಯು ನ.12ರಂದು ಲಾಯಿಲದ ವೃತ್ತದ ಬಳಿ ನಡೆಯಿತು.

ಶಾಸಕ ಹರೀಶ್ ಪೂಂಜ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ನಂತರ ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಗೃಹ ಲಕ್ಷ್ಮೀ ಹಣಕ್ಕಾಗಿ ರೈತರ ಬೆಳೆವಿಮೆ ಯೋಜನೆಯಿಂದ ಹಣ ದೋಚಿದೆ. ಬಸ್ಸಿನ ಟಿಕೆಟ್ ದರ, ಹಾಲಿನ ದರ ಸೇರಿದಂತೆ ಪ್ರತಿಯೊಂದರಲ್ಲೂ ಬೆಲೆ ಏರಿಕೆ ಮಾಡಲಾಗಿದೆ. ವೃದ್ಧಾಪ್ಯ, ವಿಧವಾ ವೇತನಗಳನ್ನು ನಿಲ್ಲಿಸುವ ಕೆಲಸವಾಗಿದೆ. ರಾಜ್ಯದ ಹಣ ಹಣ ಯಾರ ಜೇಬಿಗೆ ಹೋಗುತ್ತಿದೆ ಎನ್ನುವುದನ್ನು ಚುನಾವಣೆ ಸಂದರ್ಭದಲ್ಲಿ ಸುಳ್ಳು ಹೇಳಿಕೊಂಡು ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸಿಗರಿಗೆ ಪ್ರತಿಯೊಬ್ಬರು ಪ್ರಶ್ನಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ತಾಲೂಕು ಪಂಚಾಯತ್ ಮಾಜಿ ಸದಸ್ಯ ಸುಧಾಕರ್ ಬಿಎಲ್ ಪ್ರಸ್ತಾವಿಸಿದರು.

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಲಾಯಿಲ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಕನ್ನಾಜೆ, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಅಜಿತ್ ಆರಿಗ, ಮಂಡಲ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಮಂಡಲ ಕೋಶಾಧಿಕಾರಿ ಜಯಂತ್ ಗುರಿಪಳ್ಳ, ತಾಲೂಕು ಎಸ್ ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಉಪಸ್ಥಿತರಿದ್ದರು.

ಲಾಯಿಲ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ ಸ್ವಾಗತಿಸಿದರು. ಗ್ರಾ.ಪಂ. ಮಾಜಿ ಸದಸ್ಯ ಮಹೇಶ್ ಕುಲಾಲ್ ನಿರೂಪಿಸಿದರು. ಯುವ ಮೋರ್ಚಾದ ಉಪಾಧ್ಯಕ್ಷ ಗಣೇಶ ಆರ್ ವಂದಿಸಿದರು.

Related posts

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya
error: Content is protected !!