ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ, ಉಜಿರೆಯ ಏಳನೇ ತರಗತಿಯ ವಿದ್ಯಾರ್ಥಿನಿ ಸಾನಿಧ್ಯ ಹೆಬ್ಬಾರ್ ಅವರು ರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆ-2026ರ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಇಂಧನ ಸಂರಕ್ಷಣೆ ಹಾಗೂ ಇಂಧನ ಭದ್ರತೆಯ ಮಹತ್ವವನ್ನು ಸಾರುವ “Energy Conservation for Energy Security” ಎಂಬ ವಿಷಯದಡಿ ಆಯೋಜಿಸಲಾದ ಈ ಸ್ಪರ್ಧೆಯಲ್ಲಿ ಸಾನಿಧ್ಯ ಅವರು ತಮ್ಮ ಕಲಾತ್ಮಕ ಅಭಿವ್ಯಕ್ತಿ, ಸೃಜನಶೀಲತೆ ಹಾಗೂ ಚಿತ್ರಕಲಾ ಪ್ರತಿಭೆಯ ಮೂಲಕ ಗಮನ ಸೆಳೆದಿದ್ದಾರೆ.
ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯು ನ.18ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ಹಂತದಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆಗೆ ಹಾಗೂ ನಾಡಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.















