ಬೆಳ್ತಂಗಡಿ: ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ ಸಮೀಪ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಇಂದು (ನ.12 ರಂದು) ಮುಂಜಾನೆ ನಡೆದಿದೆ.
ಬೆಳಗಾವಿ ಮೂಲದ ಕಾರು ಇದಾಗಿದ್ದು, ಕಾರಿನಲ್ಲಿ 6 ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರೂ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣವಾಗಿ ಮಗುಚಿ ಬಿದ್ದಿದ್ದು, ಸ್ಥಳೀಯರ ಸಹಕಾರದಿಂದ ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.















