November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವಾಮದಪದವು ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕಕ್ಯಪದವು: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬಂಟ್ವಾಳ ಹಾಗೂ ವಾಮದಪದವು ವಲಯದ ವತಿಯಿಂದ ಎಲ್.ಸಿ.ಆರ್ ಇಂಡಿಯನ್ ಶಾಲೆ, ಕಕ್ಯಪದವು ಇದರ ಸಹಯೋಗದೊಂದಿಗೆ 2026–27ನೇ ಸಾಲಿನ ವಾಮದಪದವು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ನ.12ರಂದು ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀಮತಿ ಬಬಿತಾ ರೋಹಿನಾಥ್ ಅವರು ವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಶ್ರೀಮತಿ ಆಶಾ ನಾಯಕ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ವಿದ್ಯಾ, ಶಿಕ್ಷಣ ಸಂಯೋಜಕರಾದ ಶ್ರೀ ರಾಮಾನಂದ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ನಾಗರತ್ನ, ವಿಶೇಷ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಸುರೇಖಾ ಮತ್ತು ಶ್ರೀ ರವೀಂದ್ರ, ವಾಮದಪದವು ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ರವಿಕುಮಾರ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಜೋಯಿಲ್ ಲೋಬೊ, ಪ್ರಾಥಮಿಕ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಜಯರಾಮ್, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಸಂದೇಶ್, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಎನ್., ದೈಹಿಕ ಶಿಕ್ಷಕರ ಸಂಘದ ತಾಲೂಕು ಘಟಕದ ಕಾರ್ಯದರ್ಶಿ ಶ್ರೀ ಜನಾರ್ಧನ್ ಹಾಗೂ ಸಂಘದ ಪದಾಧಿಕಾರಿ ಶ್ರೀ ಚಿನ್ನಪ್ಪ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರತಿಭಾ ಕಾರಂಜಿ ನಿರ್ವಹಣಾ ತಂಡದ ಸದಸ್ಯರಾದ ಇಮ್ತಿಯಾಜ್, ಮ್ಯಾಗ್ನೆಟ್ ಮಾರ್ಲಿನ್ ಡಿಸೋಜ, ಪುಷ್ಪಲತಾ, ರಮ್ಯಾ, ಮಮತಾ ಕೆ.ಎಸ್., ಮಹೇಶ್ ಕುಮಾರ್ ಮತ್ತು ಜಯಪ್ರಕಾಶ್ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶಿವಾನಿ ರೋಹಿನಾಥ್, ಪ್ರಾಂಶುಪಾಲರಾದ ಶ್ರೀ ಜೋಸ್ಟನ್ ಲೋಬೊ, ಸಂಯೋಜಕರಾದ ಶ್ರೀ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯ ಕೆ. ಅವರು ಕಾರ್ಯಕ್ರಮಕ್ಕೆ ಸಹಕರಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್ ಅವರು, “ಪ್ರತಿಭೆ ಎಂಬುದು ಮಕ್ಕಳ ಭವಿಷ್ಯಕ್ಕೆ ಭದ್ರವಾದ ಅಡಿಪಾಯವಿದ್ದಂತೆ. ಅದಕ್ಕೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ದೊರೆತಾಗ ಮಕ್ಕಳು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಶಿಕ್ಷಣ ಸಂಯೋಜಕರಾದ ಶ್ರೀ ರಾಮಾನಂದ್ ಅವರು ಮಾತನಾಡಿ, “ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ” ಎಂದರು. ಇದೇ ಸಂದರ್ಭದಲ್ಲಿ ಎಲ್.ಸಿ.ಆರ್ ಇಂಡಿಯನ್ ಶಾಲೆಯ ಶಿಸ್ತು, ಅಚ್ಚುಕಟ್ಟಾದ ವ್ಯವಸ್ಥೆ, ಕಾರ್ಯಕ್ರಮದ ಸುವ್ಯವಸ್ಥಿತ ನಿರ್ವಹಣೆ ಹಾಗೂ ಶಿಕ್ಷಕರ ಸಹಕಾರವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಜೋಸ್ಟನ್ ಲೋಬೊ ಅವರು ಮಾತನಾಡಿ, “ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯ ಜೊತೆಗೆ ಅವರಲ್ಲಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಪ್ರದರ್ಶಿಸಲು ಸೂಕ್ತ ಅವಕಾಶಗಳನ್ನು ಒದಗಿಸಿದಾಗ ಮಾತ್ರ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯ. ಇಂತಹ ವೇದಿಕೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ” ಎಂದು ತಿಳಿಸಿದರು.

ಈ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಒಟ್ಟು ಆರು ಕ್ಲಸ್ಟರ್‌ಗಳ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ, ತಮ್ಮಲ್ಲಿರುವ ಕಲಾತ್ಮಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರತಿಭೆಗಳನ್ನು ಅನಾವರಣಗೊಳಿಸಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಕಾರ್ಯಕ್ರಮದ ಆರಂಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯ ಕೆ. ಅವರು ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ತೀರ್ಥಲತಾ ವಂದಿಸಿದರು. ಸಹಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ ಮತ್ತು ಶ್ರೀಮತಿ ಸೌಮ್ಯ ಕೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.

ಮಕ್ಕಳಲ್ಲಿನ ಪ್ರತಿಭೆಗೆ ಪ್ರೋತ್ಸಾಹ, ಸಾಧನೆಗೆ ಸೂಕ್ತ ವೇದಿಕೆ ಹಾಗೂ ಸೃಜನಶೀಲತೆಗೆ ಹೊಸ ಚೈತನ್ಯ ನೀಡಿದ ವಾಮದಪದವು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!