November 14, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಹಾಗೂ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನ.11ರಂದು ವಿಶ್ವ ಕ್ಯಾನ್ಸರ್ ದಿನಾಚರಣೆಯ ಪ್ರಯುಕ್ತ ಕ್ಯಾನ್ಸರ್ ನ ಬಗ್ಗೆ ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ. ತಿಮ್ಮಯ್ಯ ಇವರು ನೆರವೇರಿಸಿ ಕ್ಯಾನ್ಸರ್ ಎಂಬುದು ಸಾಂಕ್ರಾಮಿಕ ರೋಗವಲ್ಲ ಆದರೆ ಅದರ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಇರಬೇಕು. ಯಾವುದೇ ವ್ಯಕ್ತಿ ಆಗಲಿ ಎಷ್ಟೇ ತಿಳಿದವರಾಗಲಿ ಇದರ ಬಗ್ಗೆ ಅರಿವಿಲ್ಲದಿದ್ದರೆ ನಾವು ಅದಕ್ಕೆ ಬಲಿಯಾಗುತ್ತೇವೆ. ಇಂದು ಇಬ್ಬರು ವೈದ್ಯರೇ ಕ್ಯಾನ್ಸರ್ ನಿಂದ ಅನಾರೋಗ್ಯ ಪೀಡಿತರಾಗಿದ್ದನ್ನು ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ಸವೇಕ್ಷಣ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಕ್ಯಾನ್ಸರ್ ಹೇಗೆ ಬರುತ್ತದೆ ಇದಕ್ಕೆ ಪ್ರಮುಖ ಕಾರಣಗಳೇನು ಮತ್ತು ಅದನ್ನು ತಡೆಗಟ್ಟಲು ಪ್ರತಿಯೊಬ್ಬರು ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಕ್ಯಾನ್ಸರ್ ರೋಗ ಒಂದು ಶಾಪವಲ್ಲ ಅದು ಬಂದರೂ ನಾವು ಮಾನಸಿಕವಾಗಿ ಗಟ್ಟಿಯಾಗಿರಬೇಕು ಅದಕ್ಕೋಸ್ಕರ ಪ್ರತಿಯೊಬ್ಬರೂ ಯಾವುದೇ ಒಂದು ತೊಂದರೆಗಳು ಉಂಟಾದಲ್ಲಿ ಮನೆ ಮದ್ದು ಅಥವಾ ಸ್ವಯಂ ಮದ್ದು ಮಾಡದೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳಿಪ್ಪಾಡಿ ಮಾತನಾಡಿ ವಿಶೇಷವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಕಾಯಿಲೆ ಬಗ್ಗೆ ಸವಿವರವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ ಮಾತನಾಡಿ ನಮ್ಮ ಜೀವನದ ಬಾಳ ಸಂಗಾತಿ- ನಮ್ಮ ದೇಹ. ಅದನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದರು . ವೇದಿಕೆಯಲ್ಲಿ ಜಿಲ್ಲಾ ಆರೋಗ್ಯ ಮೇಲ್ವಿಚಾರಕ ನಟೇಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ, ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ರವಿ ಎಂ. ಎನ್., ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಡಾ. ಸುಮನ್ ಶೆಟ್ಟಿ ಎನ್. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಂತಿಮ ಎಂ.ಕಾಂ ನ ಅಂಬಿಕಾ ಪ್ರಾರ್ಥಿಸಿ, ದೀಕ್ಷಿತ ಸ್ವಾಗತಿಸಿದರು. ಅಂತಿಮ ಎಂ.ಎ ವಿಭಾಗದ ನಿಶ್ಚಿತ ವಂದನಾರ್ಪಣೆ ಗೈದರು. ಪೂಜಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!