November 14, 2026
ಶಾಲಾ ಕಾಲೇಜು

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಸ್ವಾಮಿ ವಿವೇಕಾನಂದರ ಉಪನ್ಯಾಸ ಮಾಲಿಕೆ


ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಹಾಗೂ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ ರೇಂಜರ್ಸ್ ಘಟಕ ಇವುಗಳ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳು ಮತ್ತು ಭಾರತ ಎಂಬ ವಿಷಯದ ಮೇಲೆ 60ನೇ ಉಪನ್ಯಾಸ ಮಾಲಿಕೆಯನ್ನು ಕಾಲೇಜಿನಲ್ಲಿ ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸುರತ್ಕಲ್ ನ ಗೋವಿಂದ ದಾಸ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸಂತೋಷ್ ಆಳ್ವ ಭಾಗವಹಿಸಿ ವಿವೇಕಾನಂದರ ಚಿಂತನೆಗಳು ಇಂದಿಗೂ ಅತ್ಯಂತ ಪ್ರಸ್ತುತವಾಗಿವೆ ಒಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಅವರ ಚಿಂತನೆಗಳನ್ನು ಅಳವಡಿಸಿಕೊಂಡಲ್ಲಿ ಖಂಡಿತವಾಗಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತಾನೆ ಎಂದು ತಿಳಿಸಿದರು. ವಿವೇಕಾನಂದರು ತಮ್ಮ ಕಡಿಮೆ ಜೀವಿತಾವಧಿಯಲ್ಲಿ ಜಗತ್ಪ್ರಸಿದ್ಧರಾಗಿದ್ದು ತಮ್ಮ ವ್ಯಕ್ತಿತ್ವ ಮತ್ತು ವಿಚಾರಧಾರೆಯಿಂದ ಹಾಗಾಗಿ ನಾವುಗಳು ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅವಳೇ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಮಾತನಾಡಿ ವಿವೇಕಾನಂದರ ವಿಚಾರಗಳನ್ನು ಜಗತ್ತಿನ ಜನಗಳು ಅಳವಡಿಸಿಕೊಂಡಲ್ಲಿ ಇಂದು ದೇಶ ದೇಶಗಳ ನಡುವೆ ನಡೆಯುವ ಯುದ್ಧಗಳು ನಡೆಯುತ್ತಿರಲಿಲ್ಲ ಜಗತ್ತು ಶಾಂತಿಯುತವಾಗಿ ಇರುತ್ತಿತ್ತು ಎಂದು ತಿಳಿಸಿದರು

. ಪ್ರಾಸ್ತವಿಕವಾಗಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕರಾದ ಪ್ರೊ. ಚಂದ್ರು ಹೆಗಡೆ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ 2021 ರಲ್ಲಿ ಪ್ರಾರಂಭಗೊಂಡು ರಾಮಕೃಷ್ಣ ಮಠದ ಸಹಯೋಗದಲ್ಲಿ ಮಂಗಳೂರು ಸುತ್ತಮುತ್ತಲಿನ ಕಾಲೇಜುಗಳಲ್ಲಿ ಅವರ ವಿಚಾರ ಮಾಲಿಕೆಗಳನ್ನು ಪ್ರತಿ ತಿಂಗಳ 12ನೆಯ ತಾರೀಖು ನಡೆಸಿಕೊಂಡು ಬರುತ್ತಿದೆ ಇಂದಿಗೆ 60 ಉಪನ್ಯಾಸಮಾಲೆಯನ್ನು ನಡೆಸಲಾಗಿದೆ ಎಂದು ತಿಳಿಸಿದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ರವಿ ಎಂ ಎನ್ ವಂದನಾರ್ಪಣೆ ಗೈದರು. ಅಂತಿಮ ಎಂಕಾಂ ನ ಕುಮಾರಿ ಅಂಬಿಕಾ ಪ್ರಾರ್ಥಿಸಿ ಕುಮಾರಿ ತೇಜಸ್ವಿನಿ ಕಾರ್ಯಕ್ರಮ ನಿರುಪಿಸಿದರು.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!