November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.

ಮುಖ್ಯ ಅತಿಥಿ ಉಜಿರೆ ಪ್ರಭಾತ್ ಸ್ಟೋರ್ ಮಾಲಕ ಪ್ರವೀಣ್ ಭಟ್ ಮಾತನಾಡಿ, ಮಕ್ಕಳು ಪ್ರಕೃತಿಯನ್ನು ಪ್ರೀತಿಸುವುದರ ಜೊತೆಗೆ ಅದರ ಸಂರಕ್ಷಣೆ ಹಾಗೂ ಪೋಷಣೆಯ ಮಹತ್ವವನ್ನು ಅರಿತುಕೊಳ್ಳಬೇಕು. ಪ್ರಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯುತ ಮನೋಭಾವವನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮರ್ಲಿನ್ ಮೆನೇಜಸ್ ಮಾತನಾಡಿ, ಮಕ್ಕಳ ಜೀವನದಲ್ಲಿ ಶಿಸ್ತು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಬಾಲ್ಯದಲ್ಲಿಯೇ ಶಿಸ್ತನ್ನು ರೂಢಿಸಿಕೊಂಡರೆ ಅದು ಅವರ ಭವಿಷ್ಯದ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕ ವಂದನೀಯ ಫಾ. ಅಬೆಲ್ ಲೋಬೊ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿ, ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸುವ ಸಂದೇಶವನ್ನು ನೀಡಿದರು.

ವಿವಿಧ ಸ್ಪರ್ಧೆಗಳಲ್ಲಿ  ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ವಂ.ಫಾ. ಡಾ. ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜಾ, ಕಾರ್ಯದರ್ಶಿಗ ಮರ್ಲಿನ್ ಮೆನೇಜಸ್, ಶಾಲಾ ಅಭಿವೃದ್ಧಿ ಮಂಡಳಿಯ ಸದಸ್ಯರಾದ ಸ್ಟೀವನ್ ಮೊಂತೇರೊ ಹಾಗೂ ಬಬಿತಾ ಮೋರಸ್ ಮತ್ತು ಶಾಲೆಯ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

ಸಹಶಿಕ್ಷಕಿಯರಾದ ಜೋಯ್ಸಿ ಸ್ವಾಗತಿಸಿದರು. ನಿಶಾ ವಂದಿಸಿದರು. ತೇಜಸ್ವಿನಿ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!