ಧರ್ಮಸ್ಥಳ: ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಂದ ಆಕರ್ಷಕ ಛದ್ಮವೇಷ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಪುಟಾಣಿ ಮಕ್ಕಳು ವಿವಿಧ ರೀತಿಯ ವೇಷಭೂಷಣಗಳನ್ನು ಧರಿಸಿ, ತಮ್ಮ ಪ್ರತಿಭೆಯನ್ನು ಅದ್ಭುತವಾಗಿ ಪ್ರದರ್ಶಿಸಿದರು. ಪೋಷಕರ ಸಹಕಾರದೊಂದಿಗೆ ಮಕ್ಕಳು ವಿವಿಧ ಪಾತ್ರಗಳನ್ನು ನಿರ್ವಹಿಸಿ, ತಮ್ಮಲ್ಲಿರುವ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಅಭಿನಯ ಕೌಶಲ್ಯವನ್ನು ಅನಾವರಣಗೊಳಿಸಿದರು.
ಪೂರ್ವ ಪ್ರಾಥಮಿಕ ವಿಭಾಗದ ಹೆಚ್ಚಿನ ಸಂಖ್ಯೆಯ ಪೋಷಕರು ಉಪಸ್ಥಿತರಿದ್ದು, ಮಕ್ಕಳ ಪ್ರತಿಭಾ ಪ್ರದರ್ಶನವನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ. ವಿ. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಅತ್ಯಂತ ಉತ್ತಮವಾಗಿ ಮೂಡಿ ಬಂತು.
ಪ್ರಮೀಳಾ ಮಸ್ಕರೇನಸ್ ಹಾಗೂ ಅಮೃತಾ ವಿ. ಶೆಟ್ಟಿ ನಿರೂಪಿಸಿದರು.














