November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಮಕ್ಕಳ ದಿನಾಚರಣೆಯ ಅಂಗವಾಗಿ ಶಾಲೆಯ ಶಿಕ್ಷಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳಿಗಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಸ್ವಾಗತ ನೃತ್ಯ, ಸಮೂಹ ನೃತ್ಯ, ಗುಂಪು ಗಾಯನ, ನಾಟಕ ಹಾಗೂ ಕಿರುಪ್ರಹಸನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ಶಿಕ್ಷಕರು ಹಾಗೂ ಸಿಬ್ಬಂದಿಯವರ ಕಲಾಪ್ರತಿಭೆಯನ್ನು ಕಂಡು ವಿದ್ಯಾರ್ಥಿಗಳು ಸಂಭ್ರಮಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ನಾಯಕ ವಿದ್ಯಾರ್ಥಿ ಪ್ರತ್ಯುಶ್ ಕಾರ್ಯಕ್ರಮದ ಅತಿಥಿಯಾಗಿ ವೇದಿಕೆ ಅಲಂಕರಿಸಿದ್ದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಪೌಲಿನ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಕಲ್ಯಾಣಿ. ಎಮ್ ರಾವ್ ಸ್ವಾಗತಿಸಿ, ಶಿಕ್ಷಕಿ ವಂದಿಸಿದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya
error: Content is protected !!