November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯದಲ್ಲಿ ‘ಸಂಪದ’ ಗಾಣದ ತೆಂಗಿನ ಎಣ್ಣೆ ಗಿರಣಿ ಉದ್ಘಾಟನೆ

ಬೆಳ್ತಂಗಡಿ: ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಆದ್ಯತೆ ನೀಡಿ, ಅವುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿ ಪರಿವರ್ತಿಸಿ ಮಾರುಕಟ್ಟೆಗೆ ಪರಿಚಯಿಸುವುದರಿಂದ ಆ ಪ್ರದೇಶದ ಕೃಷಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ, ಕೃಷಿಕರು ಬೆಳೆಸುವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿ ಕೃಷಿ ಕ್ಷೇತ್ರಕ್ಕೆ ಉತ್ತೇಜನ ದೊರೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಶನ.14ರಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೆರಿಯ ಶಾಖೆಯಲ್ಲಿ ನೂತನವಾಗಿ ಆರಂಭಿಸಲಾದ ‘ಸಂಪದ’ ಗಾಣದ ತೆಂಗಿನ ಎಣ್ಣೆ ಗಿರಣಿಯನ್ನು ಉದ್ಘಾಟಿಸಿ ಮಾತನಾಡಿದರು.

ಸ್ಥಳೀಯವಾಗಿ ದೊರೆಯುವ ಕೃಷಿ ಉತ್ಪನ್ನಗಳನ್ನು ಬಳಸಿಕೊಂಡು ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವ ಪ್ರಯತ್ನಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತವೆ. ತೆಂಗಿನಕಾಯಿಯಿಂದ ಎಣ್ಣೆ ಉತ್ಪಾದಿಸುವಂತಹ ಘಟಕಗಳ ಆರಂಭದಿಂದ ಸ್ಥಳೀಯ ಕೃಷಿಕರಿಗೆ ತಮ್ಮ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ದೊರೆಯುವ ಸಾಧ್ಯತೆ ಇದೆ. ಇಂತಹ ಯೋಜನೆಗಳು ಕೃಷಿಕರು ಹಾಗೂ ಗ್ರಾಹಕರಿಬ್ಬರಿಗೂ ಪ್ರಯೋಜನಕಾರಿಯಾಗಿವೆ. ಸಹಕಾರಿ ಸಂಘಗಳು ಕೇವಲ ಆರ್ಥಿಕ ವ್ಯವಹಾರಗಳಿಗೆ ಸೀಮಿತವಾಗದೆ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.ಸಂಘದ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಗ್ರಾಹಕರ ನಡುವಿನ ಪರಸ್ಪರ ಅನ್ಯೋನ್ಯ ಸಂಬಂಧ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜಿಲ್ಲೆಯ ಸಹಕಾರಿ ಸಂಘಗಳು ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸಿ ದೇಶವೇ ಗುರುತಿಸುವಂತಹ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಗಂಡಿಬಾಗಿಲು ಸೈಂಟ್ ತೋಮಸ್ ಚರ್ಚಿನ ಧರ್ಮಗುರು ಫಾ. ವಿನೋಯಿ ಮಾಳಿಕಯಿಲ್ ಮಾತನಾಡಿ, ಸಹಕಾರದಲ್ಲಿ ಶಕ್ತಿಯಿದೆ, ಸೇವೆಯಲ್ಲಿ ಸಮಾಜದ ಕಲ್ಯಾಣವಿದೆ ಹಾಗೂ ಒಗ್ಗಟ್ಟಿನಲ್ಲಿ ಬಲವಿದೆ. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ ಮತ್ತು ಪರಸ್ಪರ ಸಹಕಾರ ಅಗತ್ಯ. ಸತತ ಪ್ರಯತ್ನದಿಂದ ಯಶಸ್ಸಿನ ಶಿಖರ ತಲುಪಲು ಸಾಧ್ಯ. ಸಹಕಾರಿ ಸಂಘಗಳು ಗ್ರಾಮದ ಅಭಿವೃದ್ಧಿ ಹಾಗೂ ಜನರ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ಸಂಘದ ಅಧ್ಯಕ್ಷ ಪ್ರಕಾಶ ನಾರಾಯಣ ಕೆ. ಮಾತನಾಡಿ, ಆರು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ ನಮ್ಮ ಸಂಘವು ಸದಸ್ಯರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಸದಸ್ಯರಿಗೆ ಕೃಷಿ ಹಾಗೂ ಇಲಾಖೆಗಳ ಯೋಜನೆಗಳ ಬಗ್ಗೆ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೂ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಂಘದ ಸೇವಾ ವ್ಯಾಪ್ತಿಯನ್ನು ವಿಸ್ತರಿಸಲಾಗುತ್ತಿದೆ. ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ಕಲ್ಪಿಸಿ ಸದಸ್ಯರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಂಪದ ಗಾಣದ ತೆಂಗಿನ ಎಣ್ಣೆ ಉತ್ಪಾದನಾ ಘಟಕವನ್ನು ಆರಂಭಿಸಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರ್ದೇಶಕ ರಾಘವ ಕಲ್ಮಂಜ ವಹಿಸಿದ್ದರು. ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಂ ಡಿ. ಶುಭ ಹಾರೈಸಿದರು.

ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಚಂದ್ರಶೇಖರ್ ಕೆ.ಎಸ್. ಹಾಗೂ ತೋಟಗಾರಿಕಾ ಅಧಿಕಾರಿ ಮಹಾವೀರ ಅವರು ತೋಟಗಾರಿಕಾ ಇಲಾಖೆಯಿಂದ ಕೃಷಿಕರಿಗೆ ದೊರೆಯುವ ಸೌಲಭ್ಯಗಳು, ಯೋಜನೆಗಳು ಮತ್ತು ಅವುಗಳ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ನೆರಿಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಸರಸ್ವತಿ, ಗಂಡಿಬಾಗಿಲು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಭವಾನಿ, ನೆರಿಯ ಗ್ರಾಹಕರ ಸಂಘದ ಅಧ್ಯಕ್ಷ ರಾಮ್ ಕುಮಾರ್ ಬಿ., ಸಂಪದ ರೈತ ಸೇವಾ ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾದ ವೆಂಕಟೇಶ್ವರ ಭಟ್ ಕಜೆ, ಶಿವಪ್ರಸಾದ್ ಗೌಡ ದೇವಸ್ಯ, ರವಿ ಪೂಜಾರಿ, ಅಜಯ್ ಕೆ.ಎ., ಅಶ್ವಿನಿ ಎ. ಹೆಬ್ಬಾರ್, ಸುಮಾ ಗೋಖಲೆ ಹಾಗೂ ಮೋಹಿನಿ ಭಾಗವಹಿಸಿದ್ದರು. ನಿರ್ದೇಶಕರಾದ ಚೆನ್ನಕೇಶವ ನಾಯ್ಕ ಮತ್ತು ನಾರಾಯಣ ಫಡಕೆ ಕಾರ್ಯಕ್ರಮ ನಿರೂಪಿಸಿದರು. ಶಾಖಾ ಪ್ರಬಂಧಕರಾದ ಸದಾನಂದ, ಡೇವಿಸ್ ನೆರಿಯ ಹಾಗೂ ಪುಷ್ಪಾ ಸಹಕರಿಸಿದರು. ಸಂಘದ ನೆರಿಯ ಗ್ರಾಮ ವ್ಯಾಪ್ತಿಯ ಹಿರಿಯ ಸದಸ್ಯರನ್ನು ಗೌರವಿಸಲಾಯಿತು.

Related posts

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಪತ್ನಿ ಚಿನ್ನಮ್ಮ ರವರ ಶವ ಕೆರೆಯಲ್ಲಿ ಪತ್ತೆಯಾದ ಐದು ದಿನದ ಬಳಿಕ ಪತಿ ತನಿಯಪ್ಪ ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!