ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ದ ಮಂಗಳೂರಿನ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ರವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ತೊಡ್ತಿಲ್ಲಾಯರು ಪ್ರಸಾದ ನೀಡಿ ಗೌರವಿಸಿದರು. ಬ್ಯಾಂಕ್ ಆಫ್ ಬರೋಡಾದ ಧರ್ಮಸ್ಥಳ ಶಾಖ ಪ್ರಬಂಧಕರು ಉಪಸ್ಥಿತರಿದ್ದರು.














