November 15, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

20ನೇ ಏಷ್ಯನ್ ಗೇಮ್ಸ್‌ನಲ್ಲಿ ಸ್ನೇಹ ಎಸ್.ಎಸ್.ಗೆ ಕಂಚಿನ ಪದಕ

ಉಜಿರೆ: ಇತ್ತೀಚೆಗೆ ನಡೆದ 20ನೇ ಏಷ್ಯನ್ ಗೇಮ್ಸ್‌ನ 4×100 ಮೀಟರ್ ಮಿಕ್ಸ್ಡ್ ರಿಲೇ ಸ್ಪರ್ಧೆಯಲ್ಲಿ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಗೆಲ್ಲುವ ಮೂಲಕ ವಿಶೇಷ ಸಾಧನೆ ತೋರಿ, ದೇಶಕ್ಕೆ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಸ್ನೇಹ ಎಸ್.ಎಸ್. ರವರನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವತಿಯಿಂದ ಗೌರವಿಸುವ ಕಾರ್ಯಕ್ರಮವು ಕಾಲೇಜಿನ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ, ಎಸ್‌ಡಿಎಂ ಕಾಲೇಜು ಹಾಗೂ ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಸ್ನೇಹ ಎಸ್.ಎಸ್. ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅವರು ಸ್ನೇಹ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ನಂದ ಕುಮಾರಿ, ಆಡಳಿತ ಕುಲಸಚಿವ ಪ್ರೊ ಶ್ರೀಧರ್ ಎನ್ ಭಟ್ಟ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಸೇರಿದಂತೆ ಸ್ನೇಹ ಅವರ ಪೋಷಕರು ಹಾಗೂ ಕ್ರೀಡಾ ಸಂಘದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗಮನಾರ್ಹ ಸಾಧನೆ ಮಾಡಿರುವ ಹಿರಿಯ ವಿದ್ಯಾರ್ಥಿನಿ ಸ್ನೇಹ ಎಸ್. ಎಸ್ 2013 ರಿಂದ 2018 ರವರೆಗೆ ಎಸ್‌.ಡಿ.ಎಂ ಕಾಲೇಜಿನಲ್ಲಿ ಪದವಿಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿರುವರು. ಶಿಕ್ಷಣದ ಜೊತೆಗೆ ಕಾಲೇಜಿನಲ್ಲಿ ದೊರೆತ ಕ್ರೀಡಾ ತರಬೇತಿ ಮತ್ತು ಪ್ರೋತ್ಸಾಹದಿಂದ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಬೆಳೆಸಿಕೊಂಡು ಹಲವು ರಾಷ್ಟ್ರೀಯ ಹಾಗು ಅಂತಾರಾಷ್ಟ್ರೀಯ ಮಟ್ಟದ ಸಾಧನೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಪ್ರಸ್ತುತ ಬೆಂಗಳೂರಿನ ಕೇಂದ್ರ ತೆರಿಗೆ ಇಲಾಖೆಯಲ್ಲಿ ತೆರಿಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಪರ ಜವಾಬ್ದಾರಿಗಳ ನಡುವೆಯೂ ಕ್ರೀಡೆಯಲ್ಲಿ ತಮ್ಮ ಸಾಧನೆಯ ಪಯಣವನ್ನು ಮುಂದುವರಿಸಿರುವುದು ವಿಶೇಷವಾಗಿದೆ.

ಸ್ನೇಹ ಅವರ ಈ ಅಂತಾರಾಷ್ಟ್ರೀಯ ಮಟ್ಟದ ವಿಶೇಷ ಸಾಧನೆಗೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ., ಎಸ್‌.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್., ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಶಾರದಾ, ಸುದೀನ್ ಪುಜಾರಿ, ಸಂದೇಶ್ ಪೂಂಜಾ, ಜಶ್ವಂತ್ ಗೌಡ ಹಾಗು ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಹಲವು ಅಂತಾರಾಷ್ಟ್ರೀಯ ಸಾಧನೆಗಳ ಸಾಧಕಿ : ಹಲವು ಅಂತಾರಾಷ್ಟ್ರೀಯ ಸಾಧನೆಗಳ ಸಾಧಕಿಯಾಗಿರುವ ಸ್ನೇಹ, ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಚೀನಾದಲ್ಲಿ ನಡೆದ 2ನೇ ಏಷ್ಯನ್ ರಿಲೇಸ್ ಚಾಂಪಿಯನ್‌ಶಿಪ್‌ನಲ್ಲಿ ಚಾಂಪಿಯನ್‌ಶಿಪ್ ದಾಖಲೆಯೊಂದಿಗೆ ಚಿನ್ನ ಹಾಗೂ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೋಟ್ಸ್‌ವಾನಾದಲ್ಲಿ ನಡೆದ ವರ್ಲ್ಡ್ ರಿಲೇಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅಲ್ಲದೆ, 100 ಮೀಟರ್ ಓಟವನ್ನು 11.3 ಸೆಕೆಂಡುಗಳಲ್ಲಿ ಪೂರ್ಣಗೊಳಿಸುವ ಮೂಲಕ ರಾಜ್ಯದ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ನಡೆದ 20ನೇ ಏಷ್ಯನ್ ಗೇಮ್ಸ್‌ನ 4×100 ಮೀಟರ್ ಮಿಕ್ಸ್ಡ್ ರಿಲೇ ಸ್ಪರ್ಧೆಯಲ್ಲಿ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಗೆಲ್ಲುವ ಮೂಲಕ ವಿಶೇಷ ಸಾಧನೆ ತೋರಿ, ದೇಶಕ್ಕೆ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

Related posts

ಪ್ರಧಾನಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಪ್ರಯುಕ್ತ ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya
error: Content is protected !!