November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗೆಳೆಯರ ಬಳಗ ಸಹಕಾರ ಸಂಘ ಪುಂಜಾಲಕಟ್ಟೆ ವತಿಯಿಂದ ಅಸಹಾಯಕ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ನಯನಾಡು: ಇಲ್ಲಿಯ ಗೆಳೆಯರ ಬಳಗ ಸೇವಾ ಟ್ರಸ್ಟ್, ನಯನಾಡು ಇದರ ವತಿಯಿಂದ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಗೆಳೆಯರ ಬಳಗ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ನೆಲ್ವಿಸ್ಟರ್ ಗ್ಲಾö್ಯನ್ ಪಿಂಟೊ ಇವರ ನೇತೃತ್ವದಲ್ಲಿ ಅಸಹಾಯಕ ಕುಟುಂಬಗಳಿಗೆ ಆಹಾರ ಕಿಟ್ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಸೇವಾ ಕಾರ್ಯಕ್ಕೆ ಪ್ರಾಯೋಜಕತ್ವವನ್ನು ರೋಹನ್ ಫೆರ್ನಾಂಡಿಸ್ ಮತ್ತು ಕುಟುಂಬ ಕಾಡಿಮರ್ ಮತ್ತು ಸ್ಯಾಮ್ಸನ್ ಮಿರಾಂದ ಕೊಡೆಂಜಾರ್ ಇವರು ವಹಿಸಿದ್ದರು. ಗೆಳೆಯರ ಬಳಗ ಸೇವಾ ಟ್ರಸ್ಟ್ ಇಂತಹ ಹಲವಾರು ಸಮಾಜಮುಖಿ ಕಾರ್ಯಗಳಿಗೆ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಾಯೋಜಕತ್ವ ನೀಡಿದ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿ, ಅರ್ಹರಿಗೆ ಆಹಾರ ಕಿಟ್ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗೆಳೆಯರ ಬಳಗ ಸೇವಾ ಸಂಸ್ಥೆಯ ಅದ್ಯಕ್ಷ ಡೋನ್ ಪ್ರವೀಣ್ ಕ್ರಾಸ್ತ ಹಾಗೂ ನಿರ್ದೇಶಕರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!