November 15, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಇದರ 2009- 2010ನೇ ಎಸ್ ಎಸ್ ಎಲ್ ಸಿ ಬ್ಯಾಚ್ ನ ವಿದ್ಯಾರ್ಥಿಗಳಿಂದ ಗುರುವಂದನ – ಸ್ನೇಹ ಸಮ್ಮಿಲನ ಕಾರ್ಯಕ್ರಮ

ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಹಾಗೂ ಪ್ರೌಢಶಾಲೆ ನಾವೂರು ಇದರ 2009- 2010ನೇ ಎಸ್ ಎಸ್ ಎಲ್ ಸಿ ಬ್ಯಾಚ್ ನ ವಿದ್ಯಾರ್ಥಿಗಳಿಂದ ಗುರುವಂದನ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆಯಲ್ಲಿ ನ.14ರಂದು ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಜೇಂದ್ರರವರು ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ಜೀವಂಧರ್ ಹೆಗ್ಡೆ ಉದ್ಘಾಟಿಸಿದರು.

ವೇದಿಕೆಯಲ್ಲಿ ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್, ನಿವೃತ್ತ ಮುಖ್ಯ ಶಿಕ್ಷಕ ರಾದ ಅನಂತ ಪದ್ಮನಾಭ, ದೈಹಿಕ ಶಿಕ್ಷಣ ಶಿಕ್ಷಕ ಪಂಚಾಕ್ಷರಪ್ಪ, ಶಿಕ್ಷಕರಾದ ಬಲಿರಾಮ್ ಲಮಣಿ, ಅಚ್ಚುತ ಗೌಡ, ಅಪ್ಪಾ ಸಾಹೇಬ್ ಪಾಟೀಲ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ನಾಯ್ಕ್, ಪ್ರೌಢಶಾಲೆಯ ಉಪಾಧ್ಯಕ್ಷ ಉಮೇಶ್ ಪ್ರಭು, ಗ್ರಾ. ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ, ಧರ್ಣಪ್ಪ ಮೂಲ್ಯ, ವೇದಾವತಿ, ಪ್ರಸ್ತುತ ಇರುವ ಹಿ. ಪ್ರಾ. ಶಾಲೆ ಹಾಗೂ ಪ್ರೌಢಶಾಲೆಯ ಶಿಕ್ಷಕವೃಂದ, ವರ್ಗಾವಣೆಗೊಂಡಿರುವ ಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿ. ಪ್ರಾ. ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ, ನಿವೃತ್ತಿ ಹೊಂದಿರುವ, ವರ್ಗಾವಣೆಗೊಂಡಿರುವ ಅನಿಸಿಕೆ ವ್ಯಕ್ತಪಡಿಸಿದರು.
ಮಧ್ಯಾಹ್ನ ನಂತರ ಶಾಲಾ ಮಕ್ಕಳು ಹಾಗೂ ಶಿಕ್ಷಕರಿಗೆ ವಿವಿಧ ಚಟುವಟಿಕೆಗಳು ನಡೆಯಿತು.

Related posts

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya
error: Content is protected !!