November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬ್ರೈಟ್ ಹೊರೈಝನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕರಿಮಣೇಲು: ಕರಿಮಣೇಲಿನ ಬ್ರೈಟ್ ಹೊರೈಝನ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ನ.14ರಂದು ಆಚರಿಸಲಾಯಿತು.

ಮುಖ್ಯ ಅತಿಥಿ ಪಿಎಚ್‌ಸಿಒ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಸುಮಾವತಿ ಅವರು ಮಕ್ಕಳಿಗೆ ಆರೋಗ್ಯ ಮತ್ತು ವೈಯಕ್ತಿಕ ಸ್ವಚ್ಛತೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕೇಂದ್ರ, ವೇಣೂರಿನ ಆಶಾ ಕಾರ್ಯಕರ್ತೆ ಸುಧಾ ನಾಯ್ಕ್, ಬ್ರೈಟ್ ಹೊರೈಝನ್ ಇಂಟರ್ನ್ಯಾಷನಲ್ ಶಾಲೆಯ ಕಾರ್ಯದರ್ಶಿ ಶಾಂಭವಿ, ಶೈಕ್ಷಣಿಕ ಮುಖ್ಯಸ್ಥೆ ಜೆಸಿಂಥ ಡಿ. ಕುನ್ಹ ಹಾಗೂ ಕ್ಯಾಂಪಸ್ ಹೆಡ್ ಪ್ರಖ್ಯಾತ್ ಭಂಡಾರಿ ಉಪಸ್ಥಿತರಿದ್ದರು.

Related posts

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!