November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ 25 ಕ್ರೀಡಾಪಟುಗಳಿಗೆ ಮಹಾವೀರ ಸಿಲ್ಕ್ಸ್‌ನಿಂದ ಕ್ರೀಡಾ ಸಮವಸ್ತ್ರ ಕೊಡುಗೆ

ಉಜಿರೆ: ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆಯ್ಕೆಯಾದ ಜಿಲ್ಲೆಯ 25 ಕ್ರೀಡಾಪಟುಗಳಿಗೆ ಉಜಿರೆಯ ಮಹಾವೀರ ಸಿಲ್ಕ್ಸ್ ವತಿಯಿಂದ ಕ್ರೀಡಾ ಸಮವಸ್ತ್ರಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಯಿತು.

ಐದನೇ ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯಲಿರುವ ರಾಜ್ಯಮಟ್ಟದ ಹ್ಯಾಂಡ್‌ಬಾಲ್ ಮತ್ತು ನೆಟ್‌ಬಾಲ್ ಸ್ಪರ್ಧೆಗಳಲ್ಲಿ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯ ಒಟ್ಟು 25 ಕ್ರೀಡಾಪಟುಗಳಿಗೆ ಈ ಸಮವಸ್ತ್ರಗಳನ್ನು ವಿತರಿಸಲಾಯಿತು.

ನ.13ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾವೀರ ಸಿಲ್ಕ್ಸ್‌ನ ಮಾಲಕ ಪ್ರಭಾಕರ ಬಳೆಂಜ ಅವರ ಸಹಕಾರದೊಂದಿಗೆ ಕ್ರೀಡಾ ಸಮವಸ್ತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಾವೀರ ಸಿಲ್ಕ್ಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಪುನೀತ್ ಪ್ರಭಾಕರ್, ಉಜಿರೆಯ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್, ಶಾಲೆಯ ಮುಖ್ಯಶಿಕ್ಷಕಿ ವಿದ್ಯಾ ಕಿರಣ್, ಹಿರಿಯ ಶಿಕ್ಷಕ ಚಂದ್ರಶೇಖರ್ ಭಟ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಹೇಮೋಧರ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ : ಸಮೀರ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!