November 15, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ರಿಕ್ಷಾ-ಕಾರು ಡಿಕ್ಕಿ: ರಿಕ್ಷಾ ಚಾಲಕ ಸದಾಶಿವ ಮೃತ್ಯು

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಬಿಳಿಯೂರು ಗ್ರಾಮದ ಮೈರಕಟ್ಟೆ ಎಂಬಲ್ಲಿ ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ. 13ರಂದು ನಡೆದಿದೆ.

ಸರಳೀಕಟ್ಟೆ ನೈತಡ್ಕ ನಿವಾಸಿ ಸದಾಶಿವ (55) ಮೃತಪಟ್ಟ ಚಾಲಕ. ಉಪ್ಪಿನಂಗಡಿಯಿಂದ ಬಿಳಿಯೂರು ಕಡೆಗೆ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಅಜಾಗರೂಕತೆಯಿಂದ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿದ್ದ. ರಿಕ್ಷಾ ಪ್ರಯಾಣಿಕ ವಸಂತ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

ಆಸ್ಪತ್ರೆಯ ವಿರುದ್ಧ ಸಂಬಂಧಿಕರ ಆಕ್ರೋಶ: ಅಪಘಾತದ ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸದಾಶಿವ
ಅವರು ಸಂಜೆಯವರೆಗೂ ಮಾತನಾಡುತ್ತಲೇ ಇದ್ದರು. ಆದರೆ, ಅವರಿಗೆ ಮೈಕೈ ಹಾಗೂ ಎದೆನೋವು ಕಾಣಿಸಿಕೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲು ಸಂಬಂಧಿಕರು ಮುಂದಾಗಿದ್ದರು. ಆದರೆ, ಮುಖ್ಯ ವೈದ್ಯರು ಬರಲಿ ಎಂದು ನೆಪವೊಡ್ಡಿದ ಆಸ್ಪತ್ರೆ ಸಿಬ್ಬಂದಿ ಸ್ಥಳಾಂತರಕ್ಕೆ ಒಪ್ಪಿಗೆ ನೀಡಲಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಸದಾಶಿವ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಿಕ್ಷಾ ಚಾಲಕರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Related posts

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಹರೀಶ್ ಶೆಟ್ಟಿ ಸಬ್ ಲೆಫ್ಟಿನೆಂಟ್ ರ‍್ಯಾಂಕ್ 

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ರಕ್ಷಿತ್ ಶಿವರಾಮ್ ಭೇಟಿ: ಕೋಳಿ ಸಾಕಾಣಿಕೆದಾರರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರದ ಭರವಸೆ ನೀಡಿದ ರಕ್ಷಿತ್ ಶಿವರಾಮ್

Suddi Udaya
error: Content is protected !!