ಬೆಳ್ತಂಗಡಿ: ದಿನಾಂಕ: 26.07.2016 ರಂದು ರಾತ್ರಿ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೌಕ್ರಾಡಿ ಎಂಬಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಎಂಬವರ ಮನೆಗೆ 4 ಜನ ಅಪರಿಚಿತರು ಚಿಕಿತ್ಸೆ ಪಡೆಯುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ ಚಿನ್ನಾಭರಣ, ನಗದು ಸೇರಿದಂತೆ ಒಟ್ಟು ರೂ 2,35,800 ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ:187/2006 ಕಲಂ:395, 397 ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಚಿಕ್ಕಮಗಳೂರು ಮಾಗುಂಡಿ ನಿವಾಸಿ ಮಸೂದ್ @ ಮಸೂರ ಎಂಬಾತನನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಹೆಚ್ ಸಿ-325 ನೇ ನಂಜುಂಡಯ್ಯ ಮತ್ತು ಪಿಸಿ-1944ನೇ ಮ್ಯಾಥ್ಯು ವರ್ಗಿಸ್ ರವರುಗಳು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.









