November 15, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಫಿಶರೀಸ್ ಡೆವಲಪ್‌ಮೆಂಟ್ ಬೋರ್ಡ್ ನಿರ್ದೇಶಕ ಸೆಬಾಸ್ಟಿಯನ್ ಪಿ.ಟಿ. ಅವರಿಗೆ ಸನ್ಮಾನ

ಕಳೆಂಜ: ಕರ್ನಾಟಕ ರಾಜ್ಯ ಸರ್ಕಾರದಿಂದ ಕರ್ನಾಟಕ ಫಿಶರೀಸ್ ಡೆವಲಪ್‌ಮೆಂಟ್ ಬೋರ್ಡ್‌ನ ನಿರ್ದೇಶಕರಾಗಿ ನೇಮಕಗೊಂಡಿರುವ ಸೆಬಾಸ್ಟಿಯನ್ ಪಿ.ಟಿ. ಅವರನ್ನು ಕಳೆಂಜ ಗ್ರಾಮದ ಕುದ್ದ ಅಂಗನವಾಡಿ ಕೇಂದ್ರದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ವಿವಿಧ ಸಾಮಾಜಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸೆಬಾಸ್ಟಿಯನ್ ಪಿ.ಟಿ. ಅವರಿಗೆ ಸರ್ಕಾರದ ಈ ಮಹತ್ವದ ಜವಾಬ್ದಾರಿ ದೊರೆತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೇಬಿ ಮನಸ್ವಿ ವಹಿಸಿದ್ದರು. ಬೇಬಿ ಯಜ್ಞ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುದ್ದ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಭಾಗೀರಥಿ, ಸಮಿತಿ ಸದಸ್ಯರಾದ ಸಂಜೀವ ಗೌಡ, ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ರಜನಿ, ಅಂಗನವಾಡಿ ಕೇಂದ್ರದ ಗೋಡೆ ಬರಹ ರಚಿಸಿದ ಗಣೇಶ್ ಎಂ., ಅಂಗನವಾಡಿ ಕಾರ್ಯಕರ್ತೆ ಸುಜಾ ಹಾಗೂ ಸಹಾಯಕಿ ಬಾಬಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸೆಬಾಸ್ಟಿಯನ್ ಪಿ.ಟಿ. ಅವರ ಸಾರ್ವಜನಿಕ ಸೇವೆ ಹಾಗೂ ಹೊಸ ಜವಾಬ್ದಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅವರ ಮುಂದಿನ ಕಾರ್ಯಗಳಿಗೆ ಶುಭ ಹಾರೈಸಿದರು.

ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

Related posts

ಶಿಶಿಲ : ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

Suddi Udaya

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya
error: Content is protected !!