November 16, 2026
ಪ್ರಮುಖ ಸುದ್ದಿ

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಗಣ್ಯರಿಗೆ ಸನ್ಮಾನ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ, ಬೆಳ್ತಂಗಡಿಯ ಆಡಳಿತ ಮಂಡಳಿ ಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ವಹಿಸಿಕೊಂಡಿರುವ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಫಿಶರೀಸ್ ಡೆವಲಪ್‌ಮೆಂಟ್ ನಿಗಮದ ನಿರ್ದೇಶಕರಾಗಿ ನೇಮಕಗೊಂಡಿರುವ ಕಳೆಂಜ ಗ್ರಾಮದ ಶ್ರೀಯುತ ಪಿ.ಟಿ. ಸೆಬಾಸ್ಟೀನ್ ಸಂಘದ ನಿರ್ದೇಶಕರು, ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಬೆಳ್ತಂಗಡಿ ಇದರ ಗ್ರಾಮ ಸಮಿತಿ ಚಾರ್ಮಾಡಿ ಇದರ ಸದಸ್ಯರಾಗಿ ನೇಮಕಗೊಂಡಿರುವ ಸಂಘದ ಉಪಾಧ್ಯಕ್ಷರಾದ ಶ್ರೀಯುತ ಜಾರ್ಜ್ ಎಂ.ವಿ. ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ, ಬೆಳ್ತಂಗಡಿ ಇದರ ಸದಸ್ಯರಾದ ಶ್ರೀಯುತ ಜೋಸೆಫ್ ಕೆ.ಜೆ. ಪುದುವೆಟ್ಟು ಅವರನ್ನು ಆಡಳಿತ ಮಂಡಳಿಯ ಪರವಾಗಿ ಸಂಘದ ಅಧ್ಯಕ್ಷರಾದ ಶ್ರೀಯುತ ಅನಿಲ್ ಎ.ಜೆ. ರವರು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಿದರು

.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಶ್ರೀಯುತ ಅನಿಲ್ ಎ.ಜೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸನ್ಮಾನಿತರ ಸಾಧನೆ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಅವರಿಗೆ ದೊರೆತಿರುವ ಹೊಸ ಜವಾಬ್ದಾರಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಸಂಘದ ವತಿಯಿಂದ ಸನ್ಮಾನಿತರನ್ನು ಅಭಿನಂದಿಸಿ, ಅವರ ಮುಂದಿನ ಸೇವಾ ಕಾರ್ಯಗಳಿಗೆ ಶುಭ ಹಾರೈಸಲಾಯಿತು.

Related posts

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya
error: Content is protected !!