November 16, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಮಕ್ಕಳ ಕಲರವ – ಸಂಭ್ರಮದ ಮಕ್ಕಳ ದಿನಾಚರಣೆ: ಮಕ್ಕಳೇ ದೇಶದ ಭವಿಷ್ಯದ ಅಮೂಲ್ಯ ಸಂಪತ್ತು: ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ಮಕ್ಕಳ ನಗು, ಸಂಭ್ರಮ ಹಾಗೂ ಉತ್ಸಾಹದ ನಡುವೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ನ 14ರಂದು ಮಕ್ಕಳ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳೇ ದೇಶದ ಭವಿಷ್ಯದ ಅಮೂಲ್ಯ ಸಂಪತ್ತು. ನೆಹರು ಅವರ ಆದರ್ಶ, ದೇಶಪ್ರೇಮ, ಮಕ್ಕಳ ಮೇಲಿನ ಪ್ರೀತಿ ಹಾಗೂ ದೇಶಕ್ಕಾಗಿ ಅವರು ಸಲ್ಲಿಸಿದ ಸೇವೆ ಪ್ರತಿಯೊಬ್ಬರಿಗೂ ಪ್ರೇರಣೆಯಾಗಬೇಕು. ವಿದ್ಯಾರ್ಥಿಗಳು ಉತ್ತಮ ಗುಣಗಳನ್ನು ಬೆಳೆಸಿಕೊಂಡು ದೇಶದ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಹಾರೈಸಿದರು.

ಶಾಲೆಯ ಪ್ರಾಂಶುಪಾಲರಾದ ಸುಮಿತ್ರಾ ಗೌಡ ಇವರು ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ಕೋರಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದರು.ದಿನದ ವಿಶೇಷತೆಯನ್ನು ಬಿಂಬಿಸುವಂತೆ ಶಿಕ್ಷಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನಾ ಸಭೆ ಆಯೋಜಿಸಲಾಗಿತ್ತು. ಶಾಲಾ ಪ್ರಾರ್ಥನೆ, ರಾಷ್ಟ್ರ ಪ್ರತಿಜ್ಞೆ,ದಿನದ ಶುಭನುಡಿ, ವಾರ್ತಾ ಮುಖ್ಯಾಂಶಗಳು, ಪುಸ್ತಕ ವಿಮರ್ಶೆ ಹಾಗೂ ದಿನದ ಮಹತ್ವದ ಕುರಿತು ಶಿಕ್ಷಕರು ಅರ್ಥಪೂರ್ಣವಾಗಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಮಕ್ಕಳ ಮನಸ್ಸಿನಲ್ಲಿ ಸಂತಸದ ಹೊನಲನ್ನು ಹರಿಸಲು ಶಿಕ್ಷಕರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕರ ಪ್ರತಿಭೆ, ನೃತ್ಯ ಹಾಗೂ ಮನರಂಜನಾ ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವಿಶೇಷ ಉತ್ಸಾಹ ಮೂಡಿಸಿದವು. ಬಳಿಕ ವಿದ್ಯಾರ್ಥಿಗಳಿಗಾಗಿ ತರಗತಿವಾರು ವಿವಿಧ ಮನರಂಜನಾತ್ಮಕ ಆಟಗಳನ್ನು ಆಯೋಜಿಸಲಾಗಿದ್ದು, ಮಕ್ಕಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಯಿತು.ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ವಿದ್ಯಾರ್ಥಿಗಳಿಗೆ ಸಿಹಿತಿಂಡಿಗಳನ್ನು ವಿತರಿಸಿ ಮಕ್ಕಳ ಸಂತಸವನ್ನು ಇಮ್ಮಡಿಗೊಳಿಸಿದರು.

Related posts

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ದ್ವಿತೀಯ ಪಿಯು ವಿಜ್ಞಾನವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ವಿದ್ವತ್ ಪಿ . ಯು ಕಾಲೇಜಿನಲ್ಲಿ ಪರೀಕ್ಷಾ ಕಾಯಾ೯ಗಾರ

Suddi Udaya
error: Content is protected !!