November 16, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನ.22ರಂದು ‘ಗೌಡರೆ ಗೌಜಿ -ಗಮ್ಮತ್’ ತುಳು ಸಾಂಸ್ಕೃತಿಕ ಪರ್ವ-2026: ಕಾರ್ಯಕ್ರಮದ ಯಶಸ್ಸಿಗೆ ಡಿ. ಕಿರಣ್ ಚಂದ್ರ ಪುಷ್ಪಗಿರಿ ಅವರಿಂದ ರೂ.5 ಲಕ್ಷ ಘೋಷಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ, ಬೆಳ್ತಂಗಡಿ, ವಾಣಿ ಸಹಕಾರ ಕೋ-ಆಪರೇಟಿವ್ ಸೊಸೈಟಿ ಬೆಳ್ತಂಗಡಿ ಹಾಗೂ ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವರ ಸಹಯೋಗದಲ್ಲಿ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ‘ಗೌಡರೆ ಗೂಜಿ-ಗಮ್ಮತ್’ ತುಳು ಸಾಂಸ್ಕೃತಿಕ ಪರ್ವ-2026 ಕಾರ್ಯಕ್ರಮವು ನವೆಂಬರ್ 22, 2026ರಂದು ಹಳೆಕೋಟೆಯ ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. 

ಈ ಪ್ರತಿಷ್ಠಿತ ಕಾರ್ಯಕ್ರಮದ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಸಮುದಾಯದ ನಾಯಕರು ಹಾಗೂ ಧಾರ್ಮಿಕ ಮುಖಂಡರಾದ ಡಿ. ಕಿರಣ್ ಚಂದ್ರ ಪುಷ್ಪಗಿರಿ ಅವರಿಗೆ ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಅವರು 5 ಲಕ್ಷ ರೂಪಾಯಿಗಳ ಆರ್ಥಿಕ ನೆರವನ್ನು ಘೋಷಿಸಿ, ಬೆಂಬಲ ಸೂಚಿಸಿದ್ದಾರೆ.

Related posts

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ 168 ಕೋಟಿ ವ್ಯವಹಾರ-ರೂ 71.63 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!