ಬೆಳ್ತಂಗಡಿ: ಜಮೀಯತುಲ್ ಫಲಾಹ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನ. 14 ರಂದು
“ಭಾರತ ಪಂಚರತ್ನ ಪ್ರಶಸ್ತಿ” ಪುರಸ್ಕೃತ ಹಾಜಿ ಅಬ್ದುಲ್ ಲೆತೀಫ್ ಸಾಹೇಬ್ ಅವರಿಗೆ ಸನ್ಮಾನ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 14 ತಾಲೂಕು ಘಟಕಗಳ ಪದಾಧಿಕಾರಿಗಳು, ಬೆಳ್ತಂಗಡಿ ಘಟಕದ ಅಧ್ಯಕ್ಷ ಖಾಲಿದ್ ಪುಲಾಬೆ, ಕಾರ್ಯದರ್ಶಿ ಉಮರ್ ಬೆಳ್ತಂಗಡಿ, ಅಬ್ಬೋನು ಮದ್ದಡ್ಕ, ಅಬ್ಬಾಸ್ ಎಸ್.ಕೆ. ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೇಂದ್ರ ಸಮಿತಿ ಅಧ್ಯಕ್ಷ ಅಷ್ಪಕ್ ಅಹ್ಮದ್ ಅವರು ಪ್ರಶಸ್ತಿ ಪುರಸ್ಕೃತರನ್ನು ಹಾಗೂ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯದರ್ಶಿ ಮುಹಮ್ಮದ್ ಹನೀಫ್ ಅವರು ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಕೋಶಾಧಿಕಾರಿ ಅಬ್ದುಲ್ ನಾಸರ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.















