
ಬೆಳ್ತಂಗಡಿ: ತಾಲೂಕಿನ ಹಳೆಕೋಟೆಯಲ್ಲಿರುವ ‘ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ’ ಇದರ ನೂತನ ಆಡಳಿತ ಕಚೇರಿಯ ಉದ್ಘಾಟನೆ ಹಾಗೂ ನೂತನ ಇಕೋ ಕಾರು ಹಸ್ತಾಂತರ ಸಮಾರಂಭವು ನ.16 ರಂದು ಅತ್ಯಂತ ಸಂಭ್ರಮದಿAದ ನೆರವೇರಿತು.

ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರಾದ ಡಿ. ಕಿರಣ್‌ಚಂದ್ರ ಪುಷ್ಪಗಿರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಪಿ. ಕುಶಾಲಪ್ಪ ಗೌಡ, ಗೌರವಾಧ್ಯಕ್ಷರಾದ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ, ಕಾರ್ಯದರ್ಶಿಯಾದ ಗಣೇಶ್ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ, ಯುವ ವೇದಿಕೆಯ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನಿರ್ದೇಶಕರಾದ ಜಯಾನಂದ ಗೌಡ, ಮಹಾಬಲ ಗೌಡ, ಡಿ.ಎಂ. ಗೌಡ, ಯುವರಾಜ್ ಗೌಡ ಹಾಗೂ ಯುವ ವೇದಿಕೆಯ ನವೀನ್ ಬಿ.ಕೆ. ಮತ್ತು ಪ್ರದೀಪ್ ಗೌಡ ನಾಗಾಜೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳ ಚಟುವಟಿಕೆಗಳಿಗೆ ಪೂರಕವಾಗಿ ನೂತನ ಇಕೋ ಕಾರನ್ನು ಖರೀದಿಸಲಾಯಿತು. ಈ ನೂತನ ಕಚೇರಿ ಹಾಗೂ ವಾಹನ ಸೌಲಭ್ಯವು ಸಮುದಾಯದ ಸಂಘಟನೆ ಮತ್ತು ತುರ್ತು ಸೇವಾ ಕಾರ್ಯಗಳಿಗೆ ಮತ್ತಷ್ಟು ಬಲ ತುಂಬಲಿದೆ ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.















