ಉಜಿರೆ: ಬೆಂಗಳೂರಿನ ವಿದ್ಯಾನಗರದಲ್ಲಿ ನವೆಂಬರ್ 14ರಿಂದ 16ರವರೆಗೆ ನಡೆದ ರಾಜ್ಯಮಟ್ಟದ 5ನೇ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಕಂಚಿನ ಪದಕ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಶಾಲೆಯನ್ನು ಪ್ರತಿನಿಧಿಸಿ ಪಂದ್ಯಾಟದಲ್ಲಿ ಭಾಗವಹಿಸಿದ ಆರು ವಿದ್ಯಾರ್ಥಿಗಳಾದ ಪೂರ್ವಿಕ್, ನಂದನ್, ಸಮೃದ್ಧ್, ಸಂಪ್ರೀತ್, ಹರ್ಷಿತ್ ಹಾಗೂ ಮನ್ವಿತ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡು ಶಾಲೆಗೆ ಹೆಮ್ಮೆ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ ಕಿರಣ್ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರೀಡಾ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ಹೆಮೋದರ್ ಅವರು ತರಬೇತಿ ನೀಡಿದ್ದರು.














