November 17, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಭೇಟಿ

ಧರ್ಮಸ್ಥಳ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನ. 16 ರಂದು ಸಂಜೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಕ್ಷೇತ್ರದ ವತಿಯಿಂದ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ಸಂಜೆ 6 ಗಂಟೆಗೆ ಇಲ್ಲಿನ ಗಾಯತ್ರಿ ವಸತಿ ನಿಲಯದಿಂದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದವರೆಗೆ ಭವ್ಯ ಮೆರವಣಿಗೆಯ ಮೂಲಕ ಅವರನ್ನು ಬರಮಾಡಿಕೊಳ್ಳಲಾಯಿತು.ಬಳಿಕ ದೇವಸ್ಥಾನಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಸಂಜೆ ನಡೆಯುವ ವಿಶೇಷ ‘ರಂಗಪೂಜೆ’ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್.ಎಲ್. ಬೋಜೇಗೌಡ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಇಂದು ರಾತ್ರಿ ಧರ್ಮಸ್ಥಳದಲ್ಲೇ ವಾಸ್ತವ್ಯ ಹೂಡಲಿರುವ ಕುಮಾರಸ್ವಾಮಿ ಕುಟುಂಬವು, ನಾಳೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

Related posts

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya
error: Content is protected !!