November 17, 2026
ಅಭಿನಂದನೆಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ರಾಜ್ಯಮಟ್ಟದ 5ನೇ ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ ಕಂಚಿನ ಪದಕದ ಸಾಧನೆ

ಉಜಿರೆ: ಬೆಂಗಳೂರಿನ ವಿದ್ಯಾನಗರದಲ್ಲಿ ನವೆಂಬರ್ 14ರಿಂದ 16ರವರೆಗೆ ನಡೆದ ರಾಜ್ಯಮಟ್ಟದ 5ನೇ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಕಂಚಿನ ಪದಕ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಶಾಲೆಯನ್ನು ಪ್ರತಿನಿಧಿಸಿ ಪಂದ್ಯಾಟದಲ್ಲಿ ಭಾಗವಹಿಸಿದ ಆರು ವಿದ್ಯಾರ್ಥಿಗಳಾದ ಪೂರ್ವಿಕ್, ನಂದನ್, ಸಮೃದ್ಧ್, ಸಂಪ್ರೀತ್, ಹರ್ಷಿತ್ ಹಾಗೂ ಮನ್ವಿತ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡು ಶಾಲೆಗೆ ಹೆಮ್ಮೆ ತಂದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ ಕಿರಣ್ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರೀಡಾ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ಹೆಮೋದರ್ ಅವರು ತರಬೇತಿ ನೀಡಿದ್ದರು.

Related posts

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಭೆ

Suddi Udaya

ಪಟ್ರಮೆ ಕಾಲೋನಿಯಲ್ಲಿ ಹದಗೆಟ್ಟ ರಸ್ತೆ: ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya
error: Content is protected !!